Monday, June 8, 2026
Homeತಾಜಾ ಸುದ್ದಿಹಾಡು ಹಗಲೇ ಕೋರ್ಟ್ ಆವರಣದಲ್ಲಿ ವಕೀಲನ ಹತ್ಯೆಗೆ ಯತ್ನ

ಹಾಡು ಹಗಲೇ ಕೋರ್ಟ್ ಆವರಣದಲ್ಲಿ ವಕೀಲನ ಹತ್ಯೆಗೆ ಯತ್ನ

- Advertisement -
- Advertisement -

ತಮಿಳುನಾಡು; ಹಾಡು ಹಗಲೇ ಕೋರ್ಟ್ ಆವರಣದಲ್ಲಿ ವಕೀಲನ ಹತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಹೊಸೂರು ನ್ಯಾಯಾಲಯದ ಆವರಣದಲ್ಲಿ ನಡೆದಿದೆ. ವಕೀಲ ಕಣ್ಣನ್ (30) ಹಲ್ಲೆಗೊಳಗಾದ ವಕೀಲ.

ಜಮೀನು ವಿವಾದ ಹಿನ್ನೆಲೆಯಲ್ಲಿ ವಕೀಲ ಮೇಲೆ ದಾಳಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ದಾಳಿ ನಂತರ ರಕ್ತದ ಮಡುವಿನಲ್ಲಿ ಬಿದ್ದಿದ್ದ ವಕೀಲ ಕಣ್ಣನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಸ್ಥಳೀಯರು ವಕೀಲನಿಗೆ ಚಿಕಿತ್ಸೆ ಕೊಡಿಸುತ್ತಿದ್ದಾರೆ.

ಸಾವು ಬದುಕಿನ ನಡುವೆ ಗಾಯಾಳು ಕಣ್ಣನ್ ಹೋರಾಡುತ್ತಿದ್ದಾರೆ. ಘಟನಾ ಸ್ಥಳಕ್ಕೆ ಹೊಸೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ವಕೀಲ ಕಣ್ಣನ್ ಮೇಲೆ ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!