Sunday, June 7, 2026
Homeಕರಾವಳಿವಿಟ್ಲ: ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಗೆ ಕತ್ತಿಯಿಂದ ಕಡಿದು ಕೊಲೆ ಯತ್ನ

ವಿಟ್ಲ: ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಗೆ ಕತ್ತಿಯಿಂದ ಕಡಿದು ಕೊಲೆ ಯತ್ನ

- Advertisement -
- Advertisement -

ವಿಟ್ಲ: ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಹಲ್ಲೆಗೈದ ಘಟನೆ ಅಡ್ಯನಡ್ಕದ ಪುಣಚ ಸೊಸೈಟಿ ಮುಂಭಾಗ ನಡೆದಿದೆ.

ಘಟನೆಯಿಂದ ಗಂಭೀರ ಗಾಯಗೊಂಡವರನ್ನು ಕೊಳ್ಳಪದವು ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ.

ಸದ್ಯ ಗಂಭೀರ ಗಾಯಗೊಂಡಿರುವ ದಿನೇಶ್ ನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಲ್ಲೆ ನಡೆಸಿದವರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

- Advertisement -

Latest News

error: Content is protected !!