Sunday, June 7, 2026
Homeಕರಾವಳಿಮಂಗಳೂರು; ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ;  ಹಲ್ಲೆಗಳಗಾದವನ ವಿರುದ್ಧ ಪೋಕ್ಸೋ ಕೇಸ್ ದಾಖಲು

ಮಂಗಳೂರು; ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ;  ಹಲ್ಲೆಗಳಗಾದವನ ವಿರುದ್ಧ ಪೋಕ್ಸೋ ಕೇಸ್ ದಾಖಲು

- Advertisement -
- Advertisement -

ಮಂಗಳೂರು; ಮುಲ್ಕಿಯ ಕೆರೆಕಾಡು ಬಳಿ ಯುವಕನೋರ್ವನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಲಾಗಿದೆ. ಇದೀಗ ಆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹಲ್ಲೆಗೊಳಗಾದವನ ಮೇಲೆ ಪೋಕ್ಸೋ ಕೇಸ್ ದಾಖಲಾಗಿದೆ.

ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ದಾವೂದ್ ಎಂಬಾತನ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.ಆರೋಪಿ ಬೈಕ್‌ನಲ್ಲಿ ಬಾಲಕಿಯನ್ನು ಹಿಂಬಾಲಿಸಿ ಬಂದು ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಬಾಲಕಿಯ ತಂದೆಯ ಸ್ನೇಹಿತರು ದಾವೂದ್ ವರ್ತನೆಯನ್ನು ಗಮನಿಸಿದ್ದರು.ಶನಿವಾರ ಮತ್ತೆ ಅದೇ ಪ್ರದೇಶದಲ್ಲಿ ಆರೋಪಿ ಕಂಡು ಬಂದ ಹಿನ್ನೆಲೆಯಲ್ಲಿ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ.ಇದೀಗ ಬಾಲಕಿಯ ಪೋಷಕರ ದೂರಿನ ಮೇರೆಗೆ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಇದರ ಜೊತೆಗೆ ಹಲ್ಲೆ ನಡೆಸಿದವರ ವಿರುದ್ಧವೂ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!