Wednesday, June 24, 2026
Homeಕರಾವಳಿಮಂಗಳೂರಿನ ಪಂಪ್ ವೆಲ್ ನಲ್ಲಿ ಅನ್ಯ ಕೋಮಿನ ಜೋಡಿ ಮೇಲೆ ಹಲ್ಲೆ ಪ್ರಕರಣ: 8 ಮಂದಿ...

ಮಂಗಳೂರಿನ ಪಂಪ್ ವೆಲ್ ನಲ್ಲಿ ಅನ್ಯ ಕೋಮಿನ ಜೋಡಿ ಮೇಲೆ ಹಲ್ಲೆ ಪ್ರಕರಣ: 8 ಮಂದಿ ಮಂದಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಮಂಗಳೂರು: ಬೆಂಗಳೂರಿಗೆ ಖಾಸಗಿ ಬಸ್ ನಲ್ಲಿ ಹೋಗುತ್ತಿದ್ದ ಮುಸ್ಲಿಂ  ಯುವಕ ಹಾಗೂ ಹಿಂದೂ ಯುವತಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಎಂಟು ಮಂದಿಯನ್ನು ಬಂಧಿಸಲಾಗಿದೆ.

ನಿನ್ನೆ ಬೆಂಗಳೂರಿಗೆ ಖಾಸಗಿ ಬಸ್ ನಲ್ಲಿ ಹೋಗುತ್ತಿದ್ದ ವಿಭಿನ್ನ ಕೋಮಿನ ಯುವಕ ಯುವತಿಯ ಮೇಲೆ ಹಲ್ಲೆ ನಡೆಸಲಾಗಿತ್ತು. ಯುವಕನಿಗೆ ಹರಿತ ಆಯುಧದಿಂದ ಗಾಯಗೊಳಿಸಲಾಗಿತ್ತು. ಘಟನೆಯಲ್ಲಿ ಗಾಯಗೊಂಡಿರುವ ಮಹಮ್ಮದ್ ಅಸ್ವಿದ್  (23) ರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಘಟನೆಗೆ ಸಂಬಂಧಿಸಿದಂತೆ ಸುಮಾರು ಎಂಟು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದರು.

ಗುರುವಾರ ರಾತ್ರಿ ಮಂಗಳೂರಿನಿಂದ ಬೆಂಗಳೂರಿಗೆ ಖಾಸಗಿ ಬಸ್ ನಲ್ಲಿ ಹೋಗುತ್ತಿದ್ದ ಯುವಕ- ಯುವತಿಯನ್ನು ತಡೆದು ಹಲ್ಲೆ ನಡೆಸಲಾಗಿತ್ತು. ಯುವಕ ತನಗೆ ಬೆಂಗಳೂರಿನಲ್ಲಿ ಉದ್ಯೋಗ ಹುಡುಕಲು ಸಹಾಯ ಮಾಡಲು ಬಂದಿದ್ದ ಎಂಬುದಾಗಿ ಯುವತಿ ತಿಳಿಸಿದ್ದಾಳೆ ಎಂದು ಆಯುಕ್ತರು ಹೇಳಿದ್ದಾರೆ.

- Advertisement -

Latest News

error: Content is protected !!