Monday, May 6, 2024
Homeಕರಾವಳಿಕಡಬ; ಆಪರೇಷನ್ ಎಲಿಫೆಂಟ್ ಕಾರ್ಯಾಚರಣೆ ವೇಳೆ ಅಧಿಕಾರಿಗಳ ವಾಹನಗಳ ಮೇಲೆ ಕಲ್ಲು ತೂರಾಟ ಪ್ರಕರಣ; 7...

ಕಡಬ; ಆಪರೇಷನ್ ಎಲಿಫೆಂಟ್ ಕಾರ್ಯಾಚರಣೆ ವೇಳೆ ಅಧಿಕಾರಿಗಳ ವಾಹನಗಳ ಮೇಲೆ ಕಲ್ಲು ತೂರಾಟ ಪ್ರಕರಣ; 7 ಮಂದಿಯ ವಿರುದ್ಧ ಪ್ರಕರಣ ದಾಖಲು

spot_img
- Advertisement -
- Advertisement -

ಕಡಬ ತಾಲೂಕಿನ ಕೊಂಬಾರು ಗ್ರಾಮದ ಮಂಡೆಕರ ಅರಣ್ಯಪ್ರದೇಶದಲ್ಲಿ ಕಾಡಾನೆ ಸೆರೆ ಸಿಕ್ಕಿದ ಬಳಿಕ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತಗೊಳಿಸಿದ್ದಕ್ಕೆ ಆಕ್ರೋಶಗೊಂಡು ಅರಣ್ಯ ಹಾಗೂ ಪೊಲೀಸ್ ಇಲಾಖಾ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದ ಆರೋಪದಲ್ಲಿ 7 ಮಂದಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.

ಫೆ.23ರಂದು ಕೊಂಬಾರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆಯಲ್ಲಿ ಕಾಡಾನೆಯು ಸೆರೆಸಿಕ್ಕಿದ್ದು ರಾತ್ರಿ 9 ಗಂಟೆ ವೇಳೆಗೆ ಕಾಡಾನೆಯನ್ನು ದುಬಾರೆ ಆನೆ ಬಿಡಾರಕ್ಕೆ ಬಿಟ್ಟು ಬರಲು ಮುಂದಾದಾಗ ಸ್ಥಳದಲ್ಲಿದ್ದ ಕೆಲವು ಜನರು ಸ್ಥಳಕ್ಕೆ ಬಂದು ಕಾಡಾನೆ ತುಂಬಿಸಿದ ಲಾರಿಯನ್ನು ತಡೆದು ನಿಲ್ಲಿಸಿ ಹಿಡಿದಿರುವ ಆನೆಯನ್ನು ಇಲ್ಲಿಯೇ ನಿಲ್ಲಿಸಿ, ಇತರ ಕಾಡಾನೆಗಳನ್ನು ಸೆರೆಹಿಡಿದು ಒಟ್ಟಿಗೆ ಎಲ್ಲಾ ಆನೆಗಳನ್ನು ತೆಗೆದುಕೊಂಡು ಹೋಗಬೇಕು ಎಂದು ಆಕ್ರೋಶ ಹೊರಹಾಕಿದ್ರು.

ಮೊದಲು ಸೆರೆಹಿಡಿದ ಆನೆಯನ್ನು ಬಿಟ್ಟು ಬಂದು ಉಳಿದ ಕಾಡಾನೆಗಳನ್ನು ಸೆರೆಹಿಡಿಯುವುದಾಗಿ ಹೇಳಿದರೂ ಕೇಳದ ಆರೋಪಿಗಳು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದರು. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದು ಜನರಿಗೆ ತಿಳುವಳಿಕೆ ಹೇಳಿದರೂ ಕೇಳದೆ ಆಕ್ರೋಶಿತರು ಏಕಾಏಕಿ ಸುಮಾರು 09.30 ವೇಳೆಗೆ  ಸಮವಸ್ತ್ರದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು ಮತ್ತು ಅರಣ್ಯ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಕಲ್ಲು ತೂರಾಟದಿಂದ ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಪೊಲೀಸರಿಗೂ ಗಾಯಗಳಾಗಿತ್ತು. ಬಳಿಕ ಆರೋಪಿತರು ಸ್ಥಳದಲ್ಲಿ ನಿಲ್ಲಿಸಿದ್ದ ಅರಣ್ಯ ಇಲಾಖಾ ವಾಹನ ಹಾಗೂ ಪೊಲೀಸು ಇಲಾಖಾ ವಾಹನಗಳ ಮೇಲೂ ಕಲ್ಲು ತೂರಾಟ ಮಾಡಿ ವಾಹನಗಳನ್ನು ಜಖಂಗೊಳಿಸಿದ್ದರು ಎಂದು ಉಪ ವಲಯ ಅರಣ್ಯ ಅಧಿಕಾರಿ ಕಡಬ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ 7 ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

- Advertisement -
spot_img

Latest News

error: Content is protected !!