Saturday, May 18, 2024
Homeಕರಾವಳಿಮಂಗಳೂರು: ಕರ್ತವ್ಯ ನಿರತ ಪೊಲೀಸರ ಮೇಲೆ ದಾಳಿ ಪ್ರಕರಣ :  ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಮಂಗಳೂರು: ಕರ್ತವ್ಯ ನಿರತ ಪೊಲೀಸರ ಮೇಲೆ ದಾಳಿ ಪ್ರಕರಣ :  ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

spot_img
- Advertisement -
- Advertisement -

ಮಂಗಳೂರು: ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಭಾನುವಾರ ನಗರದ ಉರ್ವ ಚಿಲಿಂಬಿಗುಡ್ಡೆ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ಬೀಟ್ ಕರ್ತವ್ಯಕ್ಕೆ ತೆರಳಿದ್ದ ಇಬ್ಬರು ಪೊಲೀಸರಾದ ವೆಂಕಟೇಶ್ ಮತ್ತು ಧನಂಜಯ್ ಮೇಲೆ ತಂಡವೊಂದು ದಾಳಿ ನಡೆಸಿ ಗಾಯಗೊಳಿಸಿತ್ತು. ಇದೀಗ ಪ್ರಕರಣಕ್ಕೆ  ಸಂಬಂಧಪಟ್ಟಂತೆ  ಚಿಲಿಂಬಿಗುಡ್ಡೆ ನಿವಾಸಿಗಳಾದ ದುರ್ಗೇಶ್, ಪ್ರಜ್ವಿತ್, ರಕ್ಷಿತ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.  ಆರೋಪಿಗಳು ಶ್ರೀರಾಮ ಸೇನೆಯ ಕಾರ್ಯಕರ್ತರು ಎಂದು ಪೊಲೀಸರು ತಿಳಿಸಿದ್ದಾರೆ.

ಉರ್ವ ಪೊಲೀಸ್ ಠಾಣೆಯ ಸಿಬ್ಬಂದಿ ತಡರಾತ್ರಿ 1.30ರ ವೇಳೆಗೆ ಚಿಲಿಂಬಿಗುಡ್ಡೆ ವ್ಯಾಪ್ತಿಯಲ್ಲಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಸಂಘಟನೆಯೊಂದಕ್ಕೆ ಸೇರಿದ ಸುಮಾರು 8 ಮಂದಿ ಯುವಕರ ತಂಡ ರಸ್ತೆ ಬದಿ ಮದ್ಯಪಾನ ಸೇವನೆ ಮಾಡುತ್ತಾ ಹರಟೆ ಹೊಡೆಯುತ್ತಿತ್ತು. ಈ ಸಂದರ್ಭ ಪೊಲೀಸರು ವಿಚಾರಣೆ ನಡೆಸಿದ್ದು, ಇದರಿಂದ ತಗಾದೆ ತೆಗೆದ ಪಾನಮತ್ತ ಯುವಕರ ತಂಡ ಪೊಲೀಸರ ಮೇಲೆ ಎರಗಿದೆ. ಇಬ್ಬರು ಪೊಲೀಸರಿಗೂ ತಂಡ ಹಲ್ಲೆ ಮಾಡಿದ್ದಲ್ಲದೆ, ಒಬ್ಬಾತ ಪೊಲೀಸರ ಮೇಲೆ ಬೈಕ್ ಚಲಾಯಿಸಲು ಯತ್ನಿಸಿದ್ದಾನೆ. ಬಳಿಕ ತಂಡ ಅಲ್ಲಿಂದ ಪರಾರಿಯಾಗಿದೆ. ಗಾಯಾಳು ಪೊಲೀಸರನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -
spot_img

Latest News

error: Content is protected !!