Sunday, June 7, 2026
Homeಕರಾವಳಿಪುತ್ತೂರಿನಲ್ಲಿ ಕಾಂಗ್ರೆಸ್ ಮುಖಂಡ ಪ್ರದೀಪ್ ರೈ ಪಾಂಬಾರು ಮೇಲೆ  ಮಾರಣಾಂತಿಕ ಹಲ್ಲೆ

ಪುತ್ತೂರಿನಲ್ಲಿ ಕಾಂಗ್ರೆಸ್ ಮುಖಂಡ ಪ್ರದೀಪ್ ರೈ ಪಾಂಬಾರು ಮೇಲೆ  ಮಾರಣಾಂತಿಕ ಹಲ್ಲೆ

- Advertisement -
- Advertisement -

ಪುತ್ತೂರಿನಲ್ಲಿ ಕಾಂಗ್ರೆಸ್ ಮುಖಂಡ ಪ್ರದೀಪ್ ರೈ ಪಾಂಬಾರು ಮೇಲೆ  ಮಾರಾಣಾಂತಿಕ ಹಲ್ಲೆ ಮಾಡಲಾಗಿದೆ.

ಪ್ರದೀಪ್ ರೈ ಅವರು ಬೊಳುವಾರಿನಲ್ಲಿ ತಮ್ಮ ಕಾರನ್ನು ಪಾರ್ಕ್ ಮಾಡುತ್ತಿದ್ದ ವೇಳೆ ಡಸ್ಟರ್ ಕಾರಿನಲ್ಲಿ ಬಂದ ತಂಡವೊಂದು ಅವರಿಗೆ ಅವಾಚ್ಯವಾಗಿ ನಿಂದಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿ ಪರಾರಿಯಾಗಿದೆ ಎನ್ನಲಾಗಿದೆ. ಅಷ್ಟೇ ಅಲ್ಲದೇ ಕೈಯಲ್ಲಿದ್ದ ಉಂಗುರ ಹಾಗೂ ಸುಮಾರು 9 ಸಾವಿರ ನಗದನ್ನು ದೋಚಿ ಪರಾರಿಯಾಗಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಪ್ರದೀಪ್ ರೈ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಪ್ರದೀಪ್ ರೈ ಅವರು ವಿಧಾನಸಭಾ ಚುನಾವಣೆ ವೇಳೆ ಕೊಡಗು ಜಿಲ್ಲೆ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿದ್ದರು. ಬೂತ್ ಮಟ್ಟದಲ್ಲಿ ಪಕ್ಷವನ್ನ ಬಲಪಡಿಸುವಲ್ಲಿ ಯಶಸ್ವಿಯಾಗಿದ್ದರು. ಅಲ್ಲದೇ ಕೊಡಗಿನಲ್ಲಿ ಕಾಂಗ್ರೆಸ್ ನ ಅಭ್ಯರ್ಥಿಗಳನ್ನ ಗೆಲ್ಲಿಸುವಲ್ಲಿಯೂ ಯಶಸ್ವಿಯಾಗಿದ್ದರು.

- Advertisement -

Latest News

error: Content is protected !!