Thursday, June 25, 2026
Homeತಾಜಾ ಸುದ್ದಿಆರ್ ಎಸ್ ಎಸ್ ಕಾರ್ಯಕರ್ತನಿಗೆ ಚಾಕು ಇರಿತ

ಆರ್ ಎಸ್ ಎಸ್ ಕಾರ್ಯಕರ್ತನಿಗೆ ಚಾಕು ಇರಿತ

- Advertisement -
- Advertisement -

ಕೋಲಾರ; ರಾಜ್ಯದಲ್ಲಿ ಒಂದರ ಹಿಂದೆ ಒಂದರಂತೆ ಹಿಂದೂ ಕಾರ್ಯಕರ್ತರ ಕೊಲೆ ಪ್ರಕರಣಗಳು ನಡೆಯುತ್ತಿರುವ ಬೆನ್ನಲ್ಲೇ ಕೋಲಾರ ಜಿಲ್ಲೆಯ ಮಾಲೂರಿನ ಮಾರಿಕಾಂಬ ರಸ್ತೆಯಲ್ಲಿಆರ್ ಎಸ್ ಎಸ್ ಪ್ರಮುಖರೊಬ್ಬರ ಮುಖಕ್ಕೆ ಚಾಕುವಿನಿಂದ ಇರಿಯಲಾಗಿದೆ.

ಆರ್ ಎಸ್ ಎಸ್ ಪ್ರಮುಖ ರವಿ ಚಾಕು ಇರಿತದಿಂದ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಟಚ್ ಆಗಿದ್ದಕ್ಕೆ ಅಂಗಡಿಯ ಮುಂದೆ ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿದೆ. ಈ ವೇಳೆ  ಜಗಳ ಬಿಡಿಸಲು ಮುಂದಾದ ರವಿ ಮೇಲೆ ಇಬ್ಬರು ವ್ಯಕ್ತಿಗಳು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ.

ರವಿ ಅವರ ಮುಖಕ್ಕೆ ಚಾಕುವಿನಿಂದ ಇರಿಯಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!