Thursday, June 4, 2026
Homeಕರಾವಳಿಮಂಗಳೂರಿನಲ್ಲಿ ವಿದ್ಯಾರ್ಥಿಯನ್ನು ಅಪಹರಿಸಿ ಹಲ್ಲೆ ಮಾಡಿದ ಪ್ರಕರಣ; 7 ಮಂದಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಮಂಗಳೂರಿನಲ್ಲಿ ವಿದ್ಯಾರ್ಥಿಯನ್ನು ಅಪಹರಿಸಿ ಹಲ್ಲೆ ಮಾಡಿದ ಪ್ರಕರಣ; 7 ಮಂದಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಮಂಗಳೂರಿನಲ್ಲಿ ವಿದ್ಯಾರ್ಥಿಯನ್ನು ಅಪಹರಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆಲಡ್ಕದ ಇಬ್ರಾಹೀಂ ತಾಬೀಶ್ (19), ಗೂಡಿನ ಬಳಿಯ ಅಬ್ದುಲ್ಲಾ ಹನ್ನಾನ್ (19), ಸಜಿಪ ಮುನ್ನೂರು ಗ್ರಾಮದ ಶಕೀಫ್ (19), ಬಂಟ್ವಾಳದ ಶಾಹೀಕ್ (19), ನಂತೂರಿನ ತನ್ವೀರ್ (20), ಫೈಸಲ್ ನಗರದ ಅಬ್ದುಲ್ ರಶೀದ್ (19), ಗೂಡಿನ ಬಳಿಯ ಮನ್ಸೂರ್ (37) ಬಂಧಿತರು.

ವಿದ್ಯಾರ್ಥಿಗಳಾದ ಶಾಮೀರ್ ಮತ್ತು ಇಬ್ರಾಹೀಂ ಫಾಹೀಮ್ ಎಂಬವರನ್ನು ಆ.23ರಂದು ಈ ಆರೋಪಿಗಳು ಕಾರಿನಲ್ಲಿ ಅಪಹರಿಸಿ ಹಲ್ಲೆ ನಡೆಸಿದ್ದರು ಎನ್ನಲಾಗಿದೆ.ಈ ಬಗ್ಗೆ ಇಬ್ರಾಹೀಂ ಫಾಹೀಮ್ ನೀಡಿದ ದೂರಿನಂತೆ ಬಂದರು ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

- Advertisement -

Latest News

error: Content is protected !!