Thursday, June 4, 2026
HomeUncategorizedಮೂಡಬಿದರೆ; ಸಹಪಾಠಿ ಜೊತೆ ಮಾತನಾಡಿದ್ದಕ್ಕೆ ಅನ್ಯಕೋಮಿನ ವಿದ್ಯಾರ್ಥಿ ಮೇಲೆ ಹಲ್ಲೆ

ಮೂಡಬಿದರೆ; ಸಹಪಾಠಿ ಜೊತೆ ಮಾತನಾಡಿದ್ದಕ್ಕೆ ಅನ್ಯಕೋಮಿನ ವಿದ್ಯಾರ್ಥಿ ಮೇಲೆ ಹಲ್ಲೆ

- Advertisement -
- Advertisement -

ಮೂಡಬಿದರೆ; ಸಹಪಾಠಿ ಜೊತೆ ಮಾತನಾಡಿದ್ದಕ್ಕೆ ಅನ್ಯಕೋಮಿನ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ಘಟನೆ ಮೂಡಬಿದಿರೆಯ ರಾಜೀವ್ ಗಾಂಧಿ ಕಾಂಪ್ಲೆಕ್ಸ್ ಬಳಿ ನಡೆದಿದೆ.

ಸೋಮವಾರ ರಾತ್ರಿ ಮೂಡಬಿದಿರೆಯ ರಾಜೀವ್ ಗಾಂಧಿ ಕಾಂಪ್ಲೆಕ್ಸ್ ಬಳಿ ಬೆಂಗಳೂರಿಗೆ ಹೋಗಲು ಬಸ್ ಗಾಗಿ ವಿದ್ಯಾರ್ಥಿನಿ ಕಾಯುತ್ತಿದ್ದಳು.ಈ ವೇಳೆ ಆಕೆಯ ಸಹಪಾಠಿ ವಿದ್ಯಾರ್ಥಿ ಆಕೆಯ ಜೊತೆ ಮಾತನಾಡಿಸಿದ್ದ.ಇಬ್ಬರೂ ಸ್ವಲ್ಪ ಸಮಯ ಮಾತನಾಡಿದ್ದರು.ಬಳಿಕ ಬಸ್ ಬಂದ ಕಾರಣ ವಿದ್ಯಾರ್ಥಿನಿ ತೆರಳಿದ್ದಳು.ಬಳಿಕ ವಿದ್ಯಾರ್ಥಿಯ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.

ಹಲ್ಲೆಗೊಳಗಾದ ವಿದ್ಯಾರ್ಥಿ ನೀಡಿದ ದೂರಿನ ಮೇರೆಗೆ ಮೂಡುಬಿದಿರೆ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿ ವಿಜಯ್,ಅಭಿಲಾಷ್ ಹಾಗೂ ಸಂಜಯ್ ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

- Advertisement -

Latest News

error: Content is protected !!