Sunday, June 28, 2026
Homeಕರಾವಳಿವಿಟ್ಲ:ಅನ್ಯಕೋಮಿನ ವಿದ್ಯಾರ್ಥಿನಿ ಜೊತೆ ವಿದ್ಯಾರ್ಥಿಗೆ ಹಲ್ಲೆ

ವಿಟ್ಲ:ಅನ್ಯಕೋಮಿನ ವಿದ್ಯಾರ್ಥಿನಿ ಜೊತೆ ವಿದ್ಯಾರ್ಥಿಗೆ ಹಲ್ಲೆ

- Advertisement -
- Advertisement -

ವಿಟ್ಲ;  ಬಸ್ಸಿನಲ್ಲಿ ಅನ್ಯಕೋಮಿನ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದಕ್ಕೆ ತಂಡವೊಂದು ವಿದ್ಯಾರ್ಥಿಗೆ ಹಲ್ಲೆ ನಡೆಸಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಮಂಗಳಪದವು ನಿವಾಸಿ ಅಬ್ಬಾಸ್ ಎಂಬವರ ಪುತ್ರ ಮಹಮ್ಮದ್‌ ಶಾಕೀರ್‌ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆಂದು ವಿಟ್ಲ ಠಾಣೆಗೆ ದೂರು ನೀಡಿದ್ದಾನೆ.

ಈ ಕುರಿತು ಕೆಲಿಂಜ ನಿವಾಸಿಗಳಾದ ಚಂದ್ರಶೇಖರ, ಪ್ರಜ್ವಲ್‌, ರೋಹಿತ್‌ ಹಾಗೂ ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಶಾಕೀರ್‌, ಗುರುವಾರ ಕಾಲೇಜಿನಿಂದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮನೆಗೆ ಬರುತ್ತಿದ್ದಾಗ ಪಕ್ಕದ ಸೀಟಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಗೆ ಚಾಕಲೇಟು ತೋರಿಸಿದ್ದಾನೆಂದು ಆರೋಪಿಸಿ
ಕೆಲಿಂಜ ಎಂಬಲ್ಲಿಗೆ ಬಸ್ ತಲುಪಿದಾಗ ಬಸ್ಸಿಗೆ ಏಕಾಏಕಿಯಾಗಿ ಕೆಲಿಂಜ ನಿವಾಸಿಗಳಾದ ಚಂದ್ರಶೇಖರ, ಪ್ರಜ್ವಲ್‌, ರೋಹಿತ್‌ ಹಾಗೂ ಇತರ 3 ಮೂವರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -

Latest News

error: Content is protected !!