Friday, June 5, 2026
Homeಅಪರಾಧವೀಲಿಂಗ್ ಮಾಡಬೇಡಿ ಎಂದು ಬುದ್ಧಿವಾದ ಹೇಳಿದ ಯುವಕನ ಮೇಲೆ ಹಲ್ಲೆ; ಅನ್ಯಕೋಮಿನ ಯುವಕರಿಂದ ಚಾಕು ಇರಿತ;...

ವೀಲಿಂಗ್ ಮಾಡಬೇಡಿ ಎಂದು ಬುದ್ಧಿವಾದ ಹೇಳಿದ ಯುವಕನ ಮೇಲೆ ಹಲ್ಲೆ; ಅನ್ಯಕೋಮಿನ ಯುವಕರಿಂದ ಚಾಕು ಇರಿತ; ಯುವಕ ಗಂಭೀರ

- Advertisement -
- Advertisement -

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ವೀಲಿಂಗ್ ಹಾಗೂ ರ್‍ಯಾಶ್ ಡ್ರೈವಿಂಗ್ ಮಾಡುತ್ತಿದ್ದ ಅನ್ಯಕೋಮಿನ ಯುವಕರಿಗೆ ಬುದ್ದಿವಾದ ಹೇಳಿದ ಯುವಕನಿಗೆ, ಅನ್ಯಕೋಮಿನ ಯುವಕರು ಚಾಕುವಿನಿಂದ ಇರಿದ ಘಟನೆ ನಡೆದಿದೆ.

ಗಂಭೀರ ಗಾಯಗೊಂಡ ಯುವಕ ದೊಡ್ಡಪೇಟೆ ನಿವಾಸಿ ಸುಶೀಲ್(23).

ಘಟನೆಯ ವಿವರ: ಶಿಕಾರಿಪುರ ಪಟ್ಟಣದಲ್ಲಿ ಕಳೆದ ಕೆಲ ತಿಂಗಳಿನಿಂದ ಯುವಕರು ನಿರಂತರವಾಗಿ ಬೈಕ್ ವೀಲಿಂಗ್ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದರು. ಮಂಗಳವಾರ ರಾತ್ರಿ ಮತ್ತೆ ಅದೇ ರೀತಿ ವೀಲಿಂಗ್ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಯುವಕನೊಬ್ಬನಿಗೆ ಸುಶೀಲ್ ಬುದ್ಧಿವಾದ ಹೇಳಿದ್ದಾನೆ. ಈ ಸಂದರ್ಭದಲ್ಲಿ ಆ ಯುವಕ, ಸುಶೀಲ್‌ಗೆ ಆವಾಜ್ ಹಾಕಿ ಅಲ್ಲಿಂದ ತೆರಳಿದ್ದಾನೆ. ಆ ಬಳಿಕ ನಾಲ್ವರು ಯುವಕರ ತಂಡದೊಂದಿಗೆ ಆಗಮಿಸಿ ವಾಗ್ವಾದ ನಡೆಸಿ ಬಳಿಕ ಹೊಟ್ಟೆ ಹಾಗೂ ಎದೆ ಭಾಗಕ್ಕೆ ಚಾಕುವಿನಿಂದ ಇರಿದು ತಂಡ ಪರಾರಿಯಾಗಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನು ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಾಕು ಇರಿತ ಸಂಬಂಧಿಸಿದಂತೆ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಹಿಂದೂ ಸಂಘಟನೆ ಪದಾಧಿಕಾರಿಗಳು ಹಾಗೂ ಸ್ಥಳೀಯರು ಒತ್ತಾಯಿಸಿದ್ದಾರೆ. ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಉಳಿದವರ ಬಂಧನಕ್ಕೆ ಮೂರು ಪ್ರತ್ಯೇಕ ತಂಡ ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ್ದಾರೆ.

- Advertisement -

Latest News

error: Content is protected !!