Saturday, June 6, 2026
Homeತಾಜಾ ಸುದ್ದಿಮಂಗಳೂರು: ಬ್ರಹ್ಮರಕೊಟ್ಲು ಟೋಲ್‌ಗೇಟ್ ಬಳಿ ಟ್ರಕ್ ಡ್ರೈವರ್ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ

ಮಂಗಳೂರು: ಬ್ರಹ್ಮರಕೊಟ್ಲು ಟೋಲ್‌ಗೇಟ್ ಬಳಿ ಟ್ರಕ್ ಡ್ರೈವರ್ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ

- Advertisement -
- Advertisement -

ಮಂಗಳೂರು: ಟ್ರಕ್ ಡ್ರೈವರ್ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ಮಾಡಿರುವ ಘಟನೆ ಬ್ರಹ್ಮರಕೊಟ್ಲು ಟೋಲ್‌ಗೇಟ್ ಬಳಿ ಶುಕ್ರವಾರ ಸಂಜೆ ನಡೆದಿದೆ.

ಟ್ರಕ್ ಡ್ರೈವರ್ ತನ್ನ ವಾಹನವನ್ನು ಟೋಲ್‌ಗೇಟ್ ದಾಟಿ ಮುಂದೆ ಸಾಗುತ್ತಿದ್ದಾಗ, ಟೋಲ್ ಸಿಬ್ಬಂದಿ ಡ್ರೈವರ್ ಮೇಲೆ ಹಲ್ಲೆ ನಡೆಸಿ, ಗೂಂಡಾವರ್ತನೆ ತೋರಿದ್ದಾನೆ. ಡ್ರೈವರ್ ಟ್ರಕ್ ಒಳಗಿದ್ದರೂ ಸಹ ಸಿಬ್ಬಂದಿ ಆತನ ಮೇಲೆ ಹಲ್ಲೆ ನಡೆಸಿ, ಟ್ರಕ್ ಅನ್ನು ಹಿಂದಕ್ಕೆ ಕೊಂಡೊಯ್ಯುವಂತೆ ಹೇಳಿದ್ದಾನೆ. ಈ ಹಿನ್ನೆಲೆಯಲ್ಲಿ ಡ್ರೈವರ್ ತನ್ನ ವಾಹನವನ್ನು ಹಿಂದಕ್ಕೆ ಕೊಂಡೊಯ್ದಿದ್ದಾನೆ.

ಈ ಘಟನೆಯ ಸಂಪೂರ್ಣ ದೃಶ್ಯವನ್ನು ಸ್ಥಳದಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.  ಈ ವೀಡಿಯೋ ವೈರಲ್ ಆಗಿದ್ದು ಸಾರ್ವಜನಿಕರಿಂದ ಹಲ್ಲೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

- Advertisement -

Latest News

error: Content is protected !!