Sunday, May 5, 2024
Homeಕರಾವಳಿವಿಟ್ಲ ಪಿಎಸ್ಐ ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ, ಆರೋಪಿ ಬಂಧನ

ವಿಟ್ಲ ಪಿಎಸ್ಐ ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ, ಆರೋಪಿ ಬಂಧನ

spot_img
- Advertisement -
- Advertisement -

ವಿಟ್ಲ: ಕರ್ತವ್ಯದಲ್ಲಿದ್ದ ಪಿಎಸ್ಐ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಲು ಯತ್ನಿಸಿದ ದುಷ್ಕರ್ಮಿ ಪೋಲೀಸರ ಅತಿಥಿಯಾದ ಘಟನೆ ವಿಟ್ಲ ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ಇಂದು ಮುಂಜಾನೆ ವೇಳೆ ನಡೆದಿದೆ. ವಿಟ್ಲ ಪಿಎಸ್ಐ ವಿನೋದ್ ರೆಡ್ಡಿ ಮೇಲೆ ದುಷ್ಕರ್ಮಿಯಿಂದ ಗುಂಡಿನ ದಾಳಿ ನಡೆದಿದೆ. ಪಿಎಸ್ಐ ಗೆ ಗಾಯವಾಗಿದ್ದು, ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ.

ವಿಟ್ಲ ಸಮೀಪದ ಸಾಲೆತ್ತೂರು ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ವಿಟ್ಲ ಎಸ್.ಐ.ವಿನೋದ್ ರೆಡ್ಡಿ ಮತ್ತು ಸಿಬ್ಬಂದಿಗಳು ವಾಹನ ಗಳ ತಪಾಸಣೆ ನಡೆಸುತ್ತಿದ್ದ ವೇಳೆ ಬಿಳಿ ಬಣ್ಣದ ಕಾರಿನಲ್ಲಿದ್ದ ದುಷ್ಕರ್ಮಿಯೊರ್ವ ಎಸ್.ಐ.ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೇ ಕಾರ್ಯಚರಣೆ ನಡೆಸಿ ದ ಸಿಬ್ಬಂದಿ ಗಳು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಕಾರು ಕೂಡ ವಶಪಡಿಸಿಕೊಂಡಿದ್ದಾರೆ.

ಕೇರಳದಲ್ಲಿ ಗುಂಡಿನ ದಾಳಿ ನಡೆಸಿ ವಿಟ್ಲ ಮೂಲಕ ಪರಾರಿಯಾಗಲು ಮುಂದಾಗುತ್ತಿದ್ದಂತೆ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ವಿಟ್ಲ ಎಸೈ ನೇತೃತ್ವದ ತಂಡ ಆರೋಪಿಗಳನ್ನು ಅಡ್ಡ ಗಟ್ಟಲು ಮುಂದಾದಾಗ ಅವರ ಮೇಲೆ ದಾಳಿಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದೆ.

- Advertisement -
spot_img

Latest News

error: Content is protected !!