Sunday, June 7, 2026
Homeಕರಾವಳಿಉಡುಪಿಉಡುಪಿ;  ಮಲ್ಪೆಯಲ್ಲಿ ಮರಕ್ಕೆ ಕಟ್ಟಿ ಹಾಕಿ ಮಹಿಳೆಯ ಮೇಲೆ ಹಲ್ಲೆ ಪ್ರಕರಣ; ನಾಲ್ವರ ಬಂಧನ

ಉಡುಪಿ;  ಮಲ್ಪೆಯಲ್ಲಿ ಮರಕ್ಕೆ ಕಟ್ಟಿ ಹಾಕಿ ಮಹಿಳೆಯ ಮೇಲೆ ಹಲ್ಲೆ ಪ್ರಕರಣ; ನಾಲ್ವರ ಬಂಧನ

- Advertisement -
- Advertisement -

ಉಡುಪಿ; ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕದ್ದಿದ್ದಾರೆ ಅನ್ನೋ ಕಾರಣಕ್ಕೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಲ್ಪೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಲಕ್ಷ್ಮೀಬಾಯಿ, ಸುಂದರ್, ಶಿಲ್ಪಾ ಹಾಗೂ ಇನ್ನೋರ್ವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಮೀನು ಕದ್ದಿದ್ದಾರೆ ಎಂದು ಮಾ.18ರಂದು ವಿಜಯನಗರ ಜಿಲ್ಲೆ ಮೂಲದ ಮಹಿಳೆಗೆ ಹಲ್ಲೆ ನಡೆಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ತನಿಖೆ ನಡೆಸಿದ ಮಲ್ಪೆ ಪೊಲೀಸರು, ಹಲ್ಲೆಗೊಳಗಾದ ಮಹಿಳೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಮಹಿಳೆ ಬಂದರಿನಲ್ಲಿ ಮೀನು ಕದ್ದಿದ್ದಾರೆಂದು ಆರೋಪಿಸಿ ಲಕ್ಷ್ಮೀಬಾಯಿ ಎಂಬವರು ಹಲ್ಲೆ ಮಾಡಿದ್ದಾರೆ. ನಂತರ ಸ್ಥಳೀಯರು ಸೇರಿ, ಆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಈ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಎಸ್ಪಿ ಡಾ.ಕೆ.ಅರಣ್ ಹೇಳಿದ್ದಾರೆ.

ವಿಡಿಯೋವನ್ನು ಪರಿಶೀಲಿಸಿ, ಅದರಲ್ಲಿ ಮಹಿಳೆಗೆ ಹಲ್ಲೆ ನಡೆಸಿರುವ ನಾಲ್ವರನ್ನು ಬಂಧಿಸಲಾಗಿದೆ. ಇನ್ನು ಉಳಿದವರ ಪಾತ್ರದ ಬಗ್ಗೆ ವಿಡಿಯೋ ಮೂಲಕ ಪರಿಶೀಲನೆ ಮಾಡಿ, ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

- Advertisement -

Latest News

error: Content is protected !!