- Advertisement -
- Advertisement -
ಉಡುಪಿ : ಯಕ್ಷಗಾನ ಕಲಾವಿದರೊಬ್ಬರನ್ನು ಮನೆಯಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿದ ಆರೋಪ ಪಡುಬಿದ್ರಿಯಿಂದ ಕೇಳಿ ಬಂದಿದೆ. ಸಸಿಹಿತ್ಲು ಶ್ರೀಭಗವತಿ ಯಕ್ಷಗಾನ ಮೇಳದ ಕಲಾವಿದ ನಿತಿನ್ ಆಚಾರ್ಯ(31) ಹಲ್ಲೆಗೊಳಗಾದವರು.
ಪಡುಬಿದ್ರಿ ನಡ್ಸಾಲು ಗ್ರಾಮದ ನಿತಿನ್ ಸ್ನೇಹಿತ ,ಕಲಾವಿದ ಸಚಿನ್‌ನಿಂದ ಬಡ್ಡಿಗೆ ಸಾಲ ಪಡೆದುಕೊಂಡಿದ್ದರು. ಆದರೆ ನಿಗದಿತ ಸಮಯದೊಳಗೆ ಹಣ ವಾಪಾಸ್ ಕೊಟ್ಟಿರಲಿಲ್ಲ. ಹೀಗಾಗಿ ಸಚಿನ್, ಆತನ ಉದ್ಯಾವರದಲ್ಲಿರುವ ಮನೆಗೆ ಕರೆದುಕೊಂಡು ಹೋಗಿ, ಅಲ್ಲಿ ಮನೆಯಲ್ಲಿ ಬಲವಂತವಾಗಿ ಕೂಡಿ ಹಾಕಿದ್ದಾನೆ. ಅಲ್ಲಿ ಸಚಿನ್, ಆತನ ತಂದೆ ಕುಶಾಲ್ ಹಾಗೂ ಇನ್ನೊರ್ವ ಅಪರಿಚಿತ ವ್ಯಕ್ತಿ ಬೆತ್ತದಿಂದ ಬೆನ್ನಿಗೆ, ತಲೆಗೆ, ಕಾಲಿಗೆ ಹೊಡೆದಿದ್ದಾರೆ. ಬಳಿಕ ಖಾಲಿ ಬಾಂಡ್ ಪೇಪರ್‌ಗೆ ಬಲವಂತವಾಗಿ ಸಹಿ ಪಡೆದುಕೊಂಡಿದ್ದಾರೆ ಎಂದು ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆಗೊಳಗಾದ ನಿತಿನ್ ಆಚಾರ್ಯ ಪಡುಬಿದ್ರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
- Advertisement -