Friday, June 5, 2026
Homeಕರಾವಳಿಚಿಕ್ಕಮಗಳೂರು : ಗೋಣಿಬೀಡಿನಲ್ಲಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಂದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ  :...

ಚಿಕ್ಕಮಗಳೂರು : ಗೋಣಿಬೀಡಿನಲ್ಲಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಂದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ  :  ಗಂಭೀರ ಗಾಯಗೊಂಡ ಯುವಕ ಆಸ್ಪತ್ರೆಗೆ ದಾಖಲು

- Advertisement -
- Advertisement -

ಚಿಕ್ಕಮಗಳೂರು :  ಇಬ್ಬರು ದುಷ್ಕರ್ಮಿಗಳು ಬೈಕ್ ನಲ್ಲಿ ಬಂದು ಇನ್ನೊಂದು ಬೈಕ್ ಸವಾರನ ಮೇಲೆ ಮಾರಕಾಸ್ತ್ರಗಳಿಂದ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಮೂಡಿಗೆರೆಯಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಗೋಣಿಬೀಡು ಆನೇದಿಬ್ಬ ಬಳಿ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬೇರೊಂದು ಬೈಕ್ ನಲ್ಲಿ  ಹೋಗುತ್ತಿದ್ದ ಮೇಕನಗದ್ದೆ ಕಿರಣ್ ಎಂಬಾತನ ಮೇಲೆ ಕತ್ತಿಯಿಂದ ಕಡಿದು ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ.

ಮೇಕನಗದ್ದೆ ಕಿರಣ್ ಅವರ ಕೈ ಹಾಗೂ ಕಾಲನ್ನು ಕಡಿದು ದುಷ್ಕರ್ಮಿಗಳು ಪರಾರಿಯಾಗಿದ್ದು, ಹಳೆಯ ದ್ವೇಷದ ಹಿನ್ನೆಲೆ ಈ ಘಟನೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಹಲ್ಲೆಗೀಡಾದ ವ್ಯಕ್ತಿಯನ್ನು ಮೂಡಿಗೆರೆಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗೋಣಿಬೀಡು ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣಗಳೇನು ಎಂದು ಪೊಲೀಸರ ಸಂಪೂರ್ಣ ತನಿಖೆಯಿಂದಷ್ಟೇ ತಿಳಿಯಬೇಕಿದೆ.

- Advertisement -

Latest News

error: Content is protected !!