Wednesday, June 26, 2024
Homeಕರಾವಳಿಸುಳ್ಯ: ಕಳಂಜದಲ್ಲಿ‌ ಕ್ಷುಲ್ಲಕ ಕಾರಣಕ್ಕೆ ಜಗಳ: ಗಂಭೀರ ಗಾಯಗೊಂಡ ಯುವಕನ‌ ಸ್ಥಿತಿ ಚಿಂತಾಜನಕ

ಸುಳ್ಯ: ಕಳಂಜದಲ್ಲಿ‌ ಕ್ಷುಲ್ಲಕ ಕಾರಣಕ್ಕೆ ಜಗಳ: ಗಂಭೀರ ಗಾಯಗೊಂಡ ಯುವಕನ‌ ಸ್ಥಿತಿ ಚಿಂತಾಜನಕ

spot_img
- Advertisement -
- Advertisement -

ಸುಳ್ಯ: ಕ್ಷುಲ್ಲಕ ಕಾರಣಕ್ಕೆ ಪರಿಚಯದ ಇಬ್ಬರು ಯುವಕರ ನಡುವೆ ಜಗಳದಲ್ಲಿ‌‌ ಯುವಕನೊಬ್ಬ ಗಂಭೀರ ಗಾಯಗೊಂಡ ಘಟನೆ ಸುಳ್ಯ‌ ತಾಲೂಕಿನ ಕಳಂಜದಲ್ಲಿ ನಿನ್ನೆ ರಾತ್ರಿ ನಡೆದಿದೆ.

ಕಳಂಜದ ನಿವಾಸಿಗಳಾದ ಮಸೂದ್ ಮತ್ತು ಸುಧೀರ್ ನಡುವೆ ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಅಂಗಡಿಯ ಬಳಿ ಕ್ಷುಲ್ಲಕ ವಿಚಾರಕ್ಕೆ ಜಗಳ ಉಂಟಾಗಿದೆ. ಇಬ್ಬರು ಪರಸ್ಪರ ಹೊಡೆದಾಡಿಕೊಂಡಿದ್ದು ಸುಧೀರ್ ನ ಹಣೆಯಲ್ಲಿ ಸ್ವಲ್ಪ ರಕ್ತ ಬಂದಿದೆ. ತಕ್ಷಣ ಅಲ್ಲಿದ್ದವರು ಇಬ್ಬರನ್ನು ಸಮಾಧಾನಪಡಿಸಿ ಮನೆಗೆ ಕಳಿಸಿದ್ದಾರೆ. ಇದಾದ ಬಳಿಕ ಸುಧೀರ್ ಮತ್ತು ಆತನ ಸ್ನೇಹಿತರು, ಮಸೂದ್ ಗೆ ಕರೆಮಾಡಿ ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸೋಣ ಎಂದು ಕರೆಸಿ ಕೊಂಡಿದ್ದಾರೆ. ಇವರ ಮಾತು ನಂಬಿ ಮಸೂದ್ ಮತ್ತು ಆತನ ಸ್ನೇಹಿತ ಬೈಕ್ ನಲ್ಲಿ ತಂಡ ಕರೆದ ಸ್ಥಳಕ್ಕೆ ತೆರಳಿದ್ದಾರೆ. ತಕ್ಷಣ ಅಲ್ಲಿ ಅಡಗಿ ಕುಳಿತಿದ್ದ ಸುಧೀರ್ ಮತ್ತು ಆತನ ಸ್ನೇಹಿತರು ಏಕಾಏಕಿ ಮಸೂದ್ ಮೇಲೆ ದೊಣ್ಣೆ, ರಾಡ್ ,ಸೋಡಾ ಬಾಟಲಿಯಿಂದ ದಾಳಿ ನಡೆಸಿದ್ದಾರೆ.

ತೀವ್ರ ಗಾಯಗೊಂಡ ಮಸೂದ್ ಅಲ್ಲಿಂದ ಓಡಿಹೋಗಿದ್ದು, ವಿಷಯ ತಿಳಿದ ಬೀಟ್ ಪೊಲೀಸರು ಸ್ಥಳಕ್ಕೆ ಧಾವಿಸಿ ವಿಚಾರಣೆ ನಡೆಸಿದ್ದಾರೆ. ಪೊಲೀಸರು ಕೂಡ ಪ್ರಕರಣವನ್ನು ಸೌಹಾರ್ದಯುತವಾಗಿ ಇತ್ಯರ್ಥ ಪಡಿಸಲು ಹೇಳಿ ಅಲ್ಲಿಂದ ತೆರಳಿದ್ದಾರೆ. ನಂತರ ಎಲ್ಲರೂ ಮನೆ ಕಡೆ ತೆರಳಿದ್ದಾರೆ.

ಆದರೆ ತಲೆಗೆ ತೀವ್ರ ಹಲ್ಲೆಗೊಳಗಾಗಿ ಅಲ್ಲಿಂದ ತಪ್ಪಿಸಿಕೊಂಡ ಮಸೂದ್ ಸ್ವಲ್ಪ ದೂರ ಹೋಗಿ ಬಿದ್ದಿದ್ದಾರೆ. ಅವರನ್ನು ಎಲ್ಲಾ ಕಡೆ ಹುಡುಕಾಡಿದಾಗ ರಾತ್ರಿ 2.30 ರ ಸುಮಾರಿಗೆ ಮನೆಯೊಂದರ ಬಾವಿಯ ಬಳಿ ಪ್ರಜ್ಞಾಹೀನನಾಗಿ ಬಿದ್ದಿರುವುದು ಕಂಡುಬಂದಿದೆ. ಈ ಸಂದರ್ಭದಲ್ಲಿ ತೀವ್ರ ರಕ್ತಸ್ರಾವ ಕೂಡ ಆಗಿದೆ. ತಕ್ಷಣ ಆತನನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿನ ವೈದ್ಯರು ಆತನನ್ನು ರಾತ್ರಿಯೇ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ನಂತರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -
spot_img

Latest News

error: Content is protected !!