Sunday, July 12, 2026
Homeಕರಾವಳಿಬಂಟ್ವಾಳ; ಯುವಕ ಮೇಲೆ ತಂಡವೊಂದರಿಂದ ಹಲ್ಲೆ

ಬಂಟ್ವಾಳ; ಯುವಕ ಮೇಲೆ ತಂಡವೊಂದರಿಂದ ಹಲ್ಲೆ

- Advertisement -
- Advertisement -

ಬಂಟ್ವಾಳ; ಯುವಕ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಬಂಟ್ಟಾಳದ ಮೈಂದಾಳ ಎಂಬಲ್ಲಿ ನಡೆದಿದೆ.ಮೈಂದಾಳ ನಿವಾಸಿ ನಿಸಾರ್ ಎಂಬವರ ಮೇಲೆ ಅಪರಿಚಿತರು ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.

ಶನಿವಾರ ರಾತ್ರಿ 9.45ರ ಸುಮಾರಿಗೆ ನಿಸಾರ್ ಅಜ್ಜಿ ಮನೆಯಿಂದ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವಾಗ ಗುರಿಮಜಲು ಎಂಬಲ್ಲಿ ಅಟೋ ರಿಕ್ಷಾದ ಬಳಿ ನಿಂತಿದ್ದ 5 ಜನರ ಪೈಕಿ ಇಬ್ಬರು ನಿಸಾರ್ ಅವರನ್ನು ಅಡ್ಡ ಗಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದೇ ಸಂದರ್ಭ ರಿಕ್ಷಾದ ಬಳಿ ತಲವಾರು ಹಿಡಿದುಕೊಂಡು ನಿಂತಿದ್ದ ಮೂವರ ಪೈಕಿ ಓರ್ವ ನಿಸಾರ್ ಗೆ ದಾಳಿ ಮಾಡುವಂತೆ ಹೇಳುತ್ತಿದ್ದ ಎನ್ನಲಾಗಿದೆ.ಈ ವೇಳೆ ನಿಸಾರ್ ದುಷ್ಕರ್ಮಿಗಳ ಕೈಯಿಂದ ತಪ್ಪಿಸಿ ಓಡಿ ಹೋಗಿದ್ದು, ಸ್ನೇಹಿತನಿಗೆ ಕರೆ ಮಾಡಿ ತಿಳಿಸಿ ಬಳಿಕ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!