Thursday, June 4, 2026
Homeಕರಾವಳಿಮಂಗಳೂರು; ಚೂರಿ ಇರಿದು ಕೊಲೆಗೆ ಯತ್ನ, ಯುವಕನ ಸ್ಥಿತಿ ಗಂಭೀರ

ಮಂಗಳೂರು; ಚೂರಿ ಇರಿದು ಕೊಲೆಗೆ ಯತ್ನ, ಯುವಕನ ಸ್ಥಿತಿ ಗಂಭೀರ

- Advertisement -
- Advertisement -

ಮಂಗಳೂರು; ಚೂರಿಯಿಂದ ಇರಿದು ಯುವಕನ ಕೊಲೆಗೆ ಯತ್ನಿಸಿರುವ ಘಟನೆ ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾ.3 ರ ತಡರಾತ್ರಿ ನಡೆದಿದೆ.

ಉಳ್ಳಾಲ ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಎಂಬಾತನ ಕೊಲೆಗೆ ಯತ್ನಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದಕತ್ತುಲ್ಲಾ ಮನೆಯಲ್ಲಿದ್ದ ಹೊರಗೆ ಕರೆಸಿ ಚೂರಿಯಿಂದ ಹೊಟ್ಟೆ ಭಾಗಕ್ಕೆ ಇರಿಯಲಾಗಿದೆ. ಫಿಶ್ ಆಯಿಲ್ ಮಿಲ್ ಮಾಲೀಕರಿಂದ ಬೆದರಿಸಿ ಹಣ ಪಡೆದಿರುವ ವಿಚಾರದಲ್ಲಿ ವೈಷಮ್ಯವಿತ್ತು ಎನ್ನಲಾಗಿದೆ. ಕೆಲ ತಿಂಗಳುಗಳ ಹಿಂದೆ ಇದೇ ವಿಚಾರಕ್ಕೆ ಸಂಬಂಧಿಸಿ ಆರೋಪಿಗಳ ಪೈಕಿ ಓರ್ವನಿಗೆ ಸದಕತ್ತುಲ್ಲಾ ತಂಡ ಹಲ್ಲೆ ನಡೆಸಿತ್ತು.ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದಕ್ಕೆ ಪ್ರತೀಕಾರವಾಗಿ ದಾಳಿ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ತನಿಖೆ ನಡೆಯುತ್ತಿದೆ

- Advertisement -

Latest News

error: Content is protected !!