Thursday, June 4, 2026
Homeಕರಾವಳಿಬಂಟ್ವಾಳ;ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನ ಪ್ರಕರಣ; ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಬಂಟ್ವಾಳ;ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನ ಪ್ರಕರಣ; ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಬಂಟ್ವಾಳ;ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ನಂದಾವರ ನಿವಾಸಿ ಮಹಮ್ಮದ್ ಅರ್ಪಾಸ್ ಎಂಬಾತನಿಗೆ ಮೂವರು ಸೇರಿ ಚೂರಿ ಇರಿದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಘಟನೆಯಲ್ಲಿ ಗಾಯಗೊಂಡ ಅರ್ಪಾಸ್ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಘಟನೆಗೆ ಸಂಬಂಧಿಸಿದಂತೆ ತಾಳಿಪಡ್ಪು ನಿವಾಸಿಗಳಾದ ನವಾಜ್ ಹಾಗೂ ಆತನ ಸ್ನೇಹಿತರಾದ ಜಾಕೀರ್, ಸಫ್ವಾನ್ ಎಂಬುವರನ್ನು ಪೋಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!