Wednesday, June 24, 2026
Homeತಾಜಾ ಸುದ್ದಿಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಹಲ್ಲೆ; ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್‌

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಹಲ್ಲೆ; ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್‌

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಯೂಟ್ಯೂಬರ್‌ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ ಎನ್ನುವ ವಿಚಾರದ ಕುರಿತು ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಯುಟ್ಯೂಬರ್‌ ಗಳಾದ ಅಜಯ್‌, ಅಭಿಷೇಕ್‌, ಸಂತೋಷ್‌ ಎಂಬುವವರ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಲಾಗಿದೆ ಎನ್ನಲಾಗಿದ್ದು, ಇವರ ಹತ್ತಿರವಿದ್ದ ಕ್ಯಾಮರಾ ಕಸಿದುಕೊಂಡು ಹಾನಿ ಮಾಡಲಾಗಿದೆ. 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಕಾನೂನು ಎಲ್ಲರಿಗೂ ಒಂದೇ, ಯಾರೇ ತಪ್ಪು ಮಾಡಿದರೂ ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪರಿಸ್ಥಿತಿ ಕೈ ಮೀರಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಲಾಠಿ ಪ್ರಹಾರ ಮಾಡಲಾಗಿದ್ದು, ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ಉಂಟಾಗಿದೆ. ಭಾರೀ ಸಂಖ್ಯೆಯ ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಹಲ್ಲೆಗೊಳಗಾದ ಯುವಕರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

- Advertisement -

Latest News

error: Content is protected !!