Thursday, July 16, 2026
Homeಕರಾವಳಿಮಂಗಳೂರು; ಸೋಮೇಶ್ವರ ಬೀಚ್ ನಲ್ಲಿ ಅನ್ಯಕೋಮಿನ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ಮಂಗಳೂರು; ಸೋಮೇಶ್ವರ ಬೀಚ್ ನಲ್ಲಿ ಅನ್ಯಕೋಮಿನ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಗಾಯಾಳುಗಳು ಆಸ್ಪತ್ರೆಗೆ ದಾಖಲು

- Advertisement -
- Advertisement -

ಮಂಗಳೂರು; ಅನ್ಯಕೋಮಿನ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಸೋಮೇಶ್ವರ ಬಿಚ್ ನಲ್ಲಿ  ನಡೆದಿದೆ. ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇಂದು ಸಂಜೆ ಖಾಸಗಿ ಸಂಸ್ಥೆಗೆ ಸೇರಿದ ಕೇರಳ ಮೂಲದ ಆರು ಮಂದಿ ವಿದ್ಯಾರ್ಥಿಗಳು ಸೋಮೇಶ್ವರ ಸಮುದ್ರ ತೀರಕ್ಕೆ ಆಗಮಿಸಿದ್ದರು. ಇದರಲ್ಲಿ ಮೂವರು ವಿದ್ಯಾರ್ಥಿಗಳು ಮುಸ್ಲೀಂ ಸಮುದಾಯಕ್ಕೆ ಸೇರಿದವರೆಂಬುದನ್ನು ಗಮನಿಸಿ ತಂಡವೊಂದು ಇವರನ್ನು ಹಿಂಬಾಲಿಸಿದೆ ಎನ್ನಲಾಗಿದೆ. ಬಳಿಕ ಸಮುದ್ರ ತೀರದಲ್ಲಿ ವಿಹಾರ ನಡೆಸುತ್ತಿರುವ ಸಂದರ್ಭ ತಂಡ ದಾಳಿ ನಡೆಸಿದೆ.

ಇದರಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜತೆಗಿದ್ದ ಮೂವರು ವಿದ್ಯಾರ್ಥಿನಿಯರು ವಾಪಸ್ಸು ಊರಿಗೆ ತೆರಳಿದ್ದಾರೆಂದು ಪೊಲೀಸರಲ್ಲಿ ಸ್ಥಳೀಯರು ತಿಳಿಸಿದ್ದಾರೆ. ಉಳ್ಳಾಲ ಪೊಲೀಸರು ಸೋಮೇಶ್ವರ ಸಮುದ್ರ ತೀರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

- Advertisement -

Latest News

error: Content is protected !!