Friday, June 5, 2026
Homeತಾಜಾ ಸುದ್ದಿಕಾಸರಗೋಡು: ಮನೆಗೆ ನುಗ್ಗಿ ವೈದ್ಯರೋರ್ವರ ಮೇಲೆ ಮಾರಕಾಸ್ತ್ರ ಗಳಿಂದ ಹಲ್ಲೆ

ಕಾಸರಗೋಡು: ಮನೆಗೆ ನುಗ್ಗಿ ವೈದ್ಯರೋರ್ವರ ಮೇಲೆ ಮಾರಕಾಸ್ತ್ರ ಗಳಿಂದ ಹಲ್ಲೆ

- Advertisement -
- Advertisement -

ಕಾಸರಗೋಡು: ಮುಸುಕುಧಾರಿಗಳ ತಂಡವೊಂದು ಮನೆಗೆ ನುಗ್ಗಿ ವೈದ್ಯರೋರ್ವರ ಮೇಲೆ ಮಾರಕಾಸ್ತ್ರ ಗಳಿಂದ ಹಲ್ಲೆ ನಡೆಸಿದ ಘಟನೆ ನಗರ ಹೊರವಲಯದ ಚೌಕಿ ಸಮೀಪ ರವಿವಾರ ರಾತ್ರಿ ನಡೆದಿದೆ.

ಗಾಯಗೊಂಡ ವೈದ್ಯ ಡಾ. ಸಾಬಿಲ್ ನಾಸಿರ್(27)ರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ನಗರದ ಖಾಸಗಿ ಆಸ್ಪತ್ರೆಯ ವೈದ್ಯ ರಾಗಿದ್ದಾರೆ.

ನಾಸಿರ್ ರಾತ್ರಿ ಕೆಲಸ ಮುಗಿಸಿ ಮನೆಗೆ ತಲುಪುತ್ತಿದ್ದಂತೆ ಮೂವರು ಮುಸುಕುಧಾರಿಗಳು ಹಲ್ಲೆ ನಡೆಸಿದ್ದು, ತಪ್ಪಿಸಲೆತ್ನಿಸಿದರೂ ತಂಡವು ಬೆನ್ನಟ್ಟಿ ಹಲ್ಲೆ ನಡೆಸಿದೆ. ಬಾಗಿಲು ತೆರೆದು ಮನೆಯೊಳಗೆ ಪ್ರವೇಶಿಸುತ್ತಿದ್ದಂತೆ ತಂಡವು ಮನೆಯೊಳಗೆ ನುಗ್ಗಿ ಕೃತ್ಯ ನಡೆಸಿದೆ. ಬೊಬ್ಬೆ ಕೇಳಿ ಧಾವಿಸಿ ಬಂದ ಪರಿಸರ ವಾಸಿಗಳು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.

ಕಾಸರಗೋಡು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕಿದ್ದಾರೆ.

- Advertisement -

Latest News

error: Content is protected !!