Thursday, June 4, 2026
Homeಕರಾವಳಿಉಡುಪಿಉಡುಪಿ: ಕೋರ್ಟ್ ಆವರಣದಲ್ಲಿ ವಕೀಲರ ಮೇಲೆ ಹಲ್ಲೆ- ಆರೋಪಿ ಪೊಲೀಸರ ವಶಕ್ಕೆ

ಉಡುಪಿ: ಕೋರ್ಟ್ ಆವರಣದಲ್ಲಿ ವಕೀಲರ ಮೇಲೆ ಹಲ್ಲೆ- ಆರೋಪಿ ಪೊಲೀಸರ ವಶಕ್ಕೆ

- Advertisement -
- Advertisement -

ಉಡುಪಿ: ನಗರದ ಕೋರ್ಟ್ ಆವರಣದಲ್ಲಿ ಕೇಸ್ ಒಂದರ ಆರೋಪಿಯೊಬ್ಬ ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿ ನಂತರ ಆತನನ್ನು ಪೊಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ವಕೀಲರ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಶಾಹೀದ್ ಮಂಚಿ ಎಂದು ಗುರುತಿಸಲಾಗಿದ್ದು, ಹಲ್ಲೆಗೊಳಗಾದ ವಕೀಲರು ಗುರು ಎಂದು ತಿಳಿದು ಬಂದಿದೆ.

ಉಡುಪಿ ಕೋರ್ಟ್ ಆವರಣದಲ್ಲಿ ವಕೀಲರ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ವಕೀಲರ ಸಂಘದಿಂದ ಬಹಳ ಆಕ್ರೋಶ ವ್ಯಕ್ತವಾಗಿದೆ. ಕೋರ್ಟ್ ಆವರಣದಲ್ಲಿ ಆರೋಪಿ ಮತ್ತು ವಕೀಲರ ನಡುವೆ ಮಾತಿನ ಚಕಮಕಿ ನಡೆದಿದೆ. ಘಟನೆ ಸ್ಥಳಕ್ಕೆ ಉಡುಪಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!