Tuesday, June 9, 2026
Homeಅಪರಾಧಆಟೋ ಚಾಲಕನಿಂದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಸಾರ್ವಜನಿಕರ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಸೈಯದ್

ಆಟೋ ಚಾಲಕನಿಂದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಸಾರ್ವಜನಿಕರ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಸೈಯದ್

- Advertisement -
- Advertisement -

ತುಮಕೂರು: ಇಲ್ಲಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಾಡಗಲಿನಲ್ಲಿಯೇ ಆಟೋ ಚಾಲಕನೊಬ್ಬ ಏಳು ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ.

ಆರೋಪಿಯನ್ನು ತುಮಕೂರಿನ ಶಾಂತಿನಗರದ ಗೂಡ್ ಶೆಡ್ ಕಾಲೋನಿ ನಿವಾಸಿ ಸೈಯದ್ (40) ಎಂದು ಗುರುತಿಸಲಾಗಿದೆ.

ಆಟೋ ಚಾಲಕ ವೃತ್ತಿ ನಿರ್ವಹಿಸುತ್ತಿರುವ ಆರೋಪಿ ಸೈಯದ್, ಮಧ್ಯಾಹ್ನದ ಹೊತ್ತು 1 ಗಂಟೆ ಸುಮಾರಿಗೆ ಬಸ್ ನಿಲ್ದಾಣದ ಹತ್ತಿರ ಓಡಾಡುತ್ತಿದ್ದ ಏಳು ವರ್ಷದ ಬಾಲಕಿಯನ್ನ ಪುಸಲಾಯಿಸಿ ಆಟೋದಲ್ಲಿ ನಿರ್ಜನಕ್ಕೆ ಪ್ರದೇಶಕ್ಕೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಸಾರ್ವಜನಿಕರು ಸಾರ್ವ ಸೈಯದ್ ಬಾಲಕಿಯನ್ನು ಕರೆದೊಯ್ದಿರುವ ವಿಚಾರ ತಿಳಿದು, ಆತನನ್ನು ಹಿಂಬಾಲಿಸಿದ್ದಾರೆ. ಸಾರ್ವಜನಿಕರಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಸೈಯದ್ ನಿಂದ ಬಾಲಕಿಯನ್ನು ರಕ್ಷಿಸಿ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ. ಇನ್ನು ಬಾಲಕಿ ಅನಾಥಳಾಗಿದ್ದು, ತುಮಕೂರಿನ ರೈಲ್ವೆ ಸ್ಟೇಷನ್, ಬಸ್ ನಿಲ್ದಾಣದಲ್ಲಿ ಭಿಕ್ಷೆ ಬೇಡಿಕೊಂಡು ಓಡಾಡುತ್ತಿದ್ದಳು ಎನ್ನಲಾಗಿದೆ.

ಈ ಘಟನೆಯ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!