Friday, August 28, 2026
Homeಕರಾವಳಿಮಂಗಳೂರುಬಂಟ್ವಾಳ:ಫರಂಗೀಪೇಟೆ ಕೆನರಾ ಬ್ಯಾಂಕ್‌ನಲ್ಲಿ ಕಳ್ಳತನಕ್ಕೆ ಯತ್ನ

ಬಂಟ್ವಾಳ:ಫರಂಗೀಪೇಟೆ ಕೆನರಾ ಬ್ಯಾಂಕ್‌ನಲ್ಲಿ ಕಳ್ಳತನಕ್ಕೆ ಯತ್ನ

- Advertisement -
- Advertisement -

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ರಂಗೀಪೇಟೆಯ ‘ಮೆನೆಜಸ್ ಪ್ಲಾಜಾ’  ಕಾಂಪ್ಲೆಕ್ಸ್ ನಲ್ಲಿ  ಕಾರ್ಯನಿರ್ವಹಿಸುತ್ತಿರುವ ಕೆನರಾ ಬ್ಯಾಂಕಿನ ಶಾಖೆಯಲ್ಲಿ ದಿನಾಂಕ 12.07.2026 ರಂದು ರಾತ್ರಿ ವೇಳೆ ಯಾರೋ ಕಳ್ಳರು ಕಳ್ಳತನಕ್ಕೆ ಯತ್ನಿಸಿರುತ್ತಾರೆ.

ಇಂದು ಬೆಳಿಗ್ಗೆ ಬ್ಯಾಂಕಿನ ಸಿಬ್ಬಂದಿ ಬಾಗಿಲು ತೆರೆದಾಗ ಈ ಕೃತ್ಯ ಬೆಳಕಿಗೆ ಬಂದಿದ್ದು, ಬ್ಯಾಂಕಿನ ಮೇಲ್ಛಾವಣಿಯನ್ನು ತುಂಡರಿಸಿ ಕಳ್ಳರು ಬ್ಯಾಂಕ್ ಒಳಗೆ ಪ್ರವೇಶಿಸಿರುವುದು ಕಂಡುಬಂದಿದೆ.

ಪ್ರಸ್ತುತ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು, ಬೆರಳಚ್ಚು ತಂಡ ಹಾಗೂ ಸೋಕೋ ತಂಡಗಳು ಭೇಟಿ ನೀಡಿ ಪರಿಶೀಲನೆ ನಡೆಸಿವೆ. ಯಾವುದೇ ಬೆಲೆಬಾಳುವ ವಸ್ತುಗಳು ಕಳ್ಳತನವಾಗಿರುವುದಿಲ್ಲ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿರುತ್ತದೆ. ಪರಿಶೀಲನೆಯ ಬಳಿಕ ಹೆಚ್ಚಿನ ಮಾಹಿತಿಗಳು ಲಭ್ಯವಾಗಲಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!