ಕಡಬ: `ಕೊಟ್ಟಿಗೆಯಲ್ಲಿ ಮಲಗಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಪ್ರಕರಣಕ್ಕೆ ತಲೆಮರೆಸಿಕೊಂಡಿದ್ದ ಆರೋಪಿ ಉಮೇಶ್ ಗೌಡ ಎಂಬಾತನನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.
ದಿನಾಂಕ 13-11-2025 ರಂದು ರಾತ್ರಿ ಸಂತ್ರಸ್ತೆ ಮನೆಯ ಹೊರ ಭಾಗದ ಕೊಟ್ಟಿಗೆಯಲ್ಲಿ ಮಲಗಿದ್ದ ವೇಳೆ, ಉಮೇಶ್ ಬಂದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾಗ. ಆಗ ಮಹಿಳೆಸಹಾಯಕ್ಕಾಗಿ ಬೊಬ್ಬೆ ಹೊಡೆದಿದ್ದು, ಮನೆಯೊಳಗಿದ್ದ ಆಕೆಯ ಗಂಡ ಹಾಗೂ ಮಕ್ಕಳು ಓಡಿ ಬಂದಿದ್ದಾರೆ. ಆಗ ಆ ವ್ಯಕ್ತಿ ಸ್ಥಳೀಯ ನಿವಾಸಿ ಉಮೇಶ್ ಗೌಡ ಎಂದು ಗೊತ್ತಾಗಿದೆ. ಕೂಡಲೇ ಆತನನ್ನು ಹಿಡಿಯಲು ಪ್ರಯತ್ನಿಸಿದಾಗ ಆತನು ಎಲ್ಲರಿಗೂ ಹಲ್ಲೆ ನಡೆಸಿರುತ್ತಾನೆ. ಸ್ಥಳದಿಂದ ಆರೋಪಿ ಪರಾರಿಯಾಗುವ ವೇಳೆ ಪರಿಶಿಷ್ಟ ಪಂಗಡಕ್ಕೆ ಸೇರಿದ ಸಂತ್ರಸ್ಥ ಮಹಿಳೆಗೆ ಜಾತಿನಿಂದನೆ ಮಾಡಿರುತ್ತಾನೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು, ದಿನಾಂಕ: 16.11.2025 ರಂದು ಆರೋಪಿ ಕಡಬ ನಿವಾಸಿ ಉಮೇಶ್ ಗೌಡ ಎಂಬಾತನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.


