Friday, June 26, 2026
Homeಕರಾವಳಿಉಡುಪಿಸುಳ್ಯ: ಲಾರಿಯಡಿ ಹಾರಿ ಆತ್ಮಹತ್ಯೆಗೆ ಯತ್ನ: ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು: ಸಿಸಿಟಿವಿಯಲ್ಲಿ ಭಯಾನಕ...

ಸುಳ್ಯ: ಲಾರಿಯಡಿ ಹಾರಿ ಆತ್ಮಹತ್ಯೆಗೆ ಯತ್ನ: ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು: ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ

- Advertisement -
- Advertisement -

ಸುಳ್ಯ: ಇಲ್ಲಿನ ಗಾಂಧಿನಗರ ಮುಖ್ಯ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಚಲಿಸುತ್ತಿರುವ ‌ಲಾರಿಯಡಿಗೆ ಹಾರಿ‌ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿಯಡಿಗೆ ಹಾರಿ‌ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕ ಮಂಜುನಾಥ್ ಎಂದು ತಿಳಿದು ಬಂದಿದೆ. ತೆಂಗಿನಕಾಯಿ ತುಂಬಿಸಿಕೊಂಡು ಮುಖ್ಯ ರಸ್ತೆಯಲ್ಲಿ ಸಾಗಿ ಬರುತ್ತಿದ್ದ ಲಾರಿಯನ್ನು ಗಮನಿಸಿದ ವ್ಯಕ್ತಿ ಲಾರಿ ತನ್ನ ಬಳಿ ಬರುತ್ತಿದ್ದಂತೆ ಹಿಂದಿನ ಚಕ್ರಕ್ಕೆ ಡೈವ್ ಮಾಡಿದ್ದಾನೆ. ಚಕ್ರಕ್ಕೆ ಸಿಲುಕಿದ ಆತನನ್ನು ಲಾರಿ ಸ್ವಲ್ಪ ದೂರ ಎಳೆದೊಯ್ದಿದೆ.

ಗಂಭೀರ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಆತನನ್ನು ತಕ್ಷಣ ಸುಳ್ಯ ಸರ್ಕಾರಿ ಆಸ್ಪತ್ರೆಗೆ‌ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.‌ ಘಟನೆಯ ದೃಶ್ಯ ‌ಸಿಸಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -

Latest News

error: Content is protected !!