Wednesday, June 26, 2024
Homeಅಪರಾಧಮಂಗಳೂರು : ಪೊಲೀಸರಿಗೆ ತಲವಾರು ಬೀಸಿ ಹಲ್ಲೆಗೆ ಯತ್ನ ; ರೌಡಿ ಪರಾರಿ,ಜೊತೆಗಾರನ ಬಂಧನ !

ಮಂಗಳೂರು : ಪೊಲೀಸರಿಗೆ ತಲವಾರು ಬೀಸಿ ಹಲ್ಲೆಗೆ ಯತ್ನ ; ರೌಡಿ ಪರಾರಿ,ಜೊತೆಗಾರನ ಬಂಧನ !

spot_img
- Advertisement -
- Advertisement -

ಮಂಗಳೂರು :ನಟೋರಿಯಸ್ ರೌಡಿಯೊಬ್ಬ ವಾರಂಟ್ ಪ್ರಕರಣದಲ್ಲಿ ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸರ ಮೇಲೆ ತಲವಾರು ಬೀಸಿ ಹಲ್ಲೆಗೆ ಯತ್ನಿಸಿದ ಘಟನೆ ಇಂದು ಉಳ್ಳಾಲದಲ್ಲಿ ನಡೆದಿದೆ.

ಮುಕ್ಕಚ್ಚೇರಿ ಬಳಿಯ ಧರ್ಮನಗರ ನಿವಾಸಿ ನಟೋರಿಯಸ್ ಕ್ರಿಮಿನಲ್ ಮುಕ್ತಾರ್ ಅಹ್ಮದ್ ಎಂಬಾತನ ಬಂಧನಕ್ಕಾಗಿ ಪೊಲೀಸರು ಹೊಂಚುಹಾಕಿದ್ದರು.ಈತನ ಮೇಲೆ ಹತ್ತಕ್ಕೂ ಹೆಚ್ಚು ಕೇಸುಗಳಿದ್ದು, ಕೋರ್ಟಿಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ, ಉಳ್ಳಾಲ ಪೊಲೀಸರು ಕೋರ್ಟಿನಿಂದ ವಾರಂಟ್ ಪಡೆದು ಇಂದು ಬೆಳಗ್ಗೆ ಬಂಧಿಸಲು ತೆರಳಿದ್ದರು. ಆತನನ್ನು ಹುಡುಕಿಕೊಂಡು ಮನೆಗೆ ಹೋದಾಗ ತಲವಾರು ಹಿಡಿದೇ ಹೊರಬಂದ ಮುಕ್ತಾರ್, ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಅಲ್ಲಿಂದ ತಲವಾರು ತೋರಿಸುತ್ತಲೇ ಹತ್ತಿರದ ನಿಜಾಮುದ್ದೀನ್ ಎಂಬವನ ಬೈಕಿನಲ್ಲಿ ಪರಾರಿಯಾಗಿದ್ದಾನೆ.

ತಕ್ಷಣವೇ ಪೊಲೀಸರು ಬೆನ್ನಟ್ಟಿದ್ದು ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯ ರಸ್ತೆಯಲ್ಲಿ ಅಡ್ಡಹಾಕಿ ಬೈಕನ್ನು ಹಿಡಿದಿದ್ದಾರೆ. ಆದರೆ, ಇದರ ನಡುವಲ್ಲೇ ಮುಕ್ತಾರ್ ಅಹ್ಮದ್ ಬೈಕಿನಿಂದ ಇಳಿದು ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ. ಬೈಕಿನಲ್ಲಿದ್ದ ನಿಜಾಮುದ್ದೀನ್ ಪೊಲೀಸರು ಹಿಂಬಾಲಿಸಿ ಬಂದಿದ್ದನ್ನು ತಿಳಿದು ಎಸ್ಕೇಪ್ ಆಗುವ ಯತ್ನದಲ್ಲಿ ಮುಂದಿನಿಂದ ಬಂದ ವ್ಯಾಗನರ್ ಕಾರಿಗೆ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದಾನೆ. ಇದೆ ವೇಳೆ ಪೊಲೀಸರು ನಿಜಾಮುದ್ದೀನನನ್ನು ಬಂಧಿಸಿದ್ದಾರೆ.‌ ಈತ ಈ ಹಿಂದೆ ಟಾರ್ಗೆಟ್ ಗ್ಯಾಂಗ್ ಲೀಡರ್ ಇಲ್ಯಾಸ್ ಕೊಲೆ ಪ್ರಕರಣದಲ್ಲಿ ಪ್ರ‌ಮುಖ ಆರೋಪಿಯಾಗಿದ್ದ ದಾವೂದ್ ಎಂಬಾತನ ತಮ್ಮನಾಗಿದ್ದು ಆತನ ಕ್ರಿಮಿನಲ್ ಹಿನ್ನೆಲೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮುಕ್ತಾರ್ ವಿರುದ್ಧ ಉಳ್ಳಾಲ ಠಾಣೆ ಒಂದರಲ್ಲೇ ಏಳು ಪ್ರಕರಣಗಳಿದ್ದು ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

- Advertisement -
spot_img

Latest News

error: Content is protected !!