Sunday, May 19, 2024
Homeತಾಜಾ ಸುದ್ದಿಆರೋಗ್ಯ ಇಲಾಖೆಯಲ್ಲಿ ಹಾಜರಾತಿ ಆಧರಿಸಿ ವೇತನ ಪಾವತಿ ವ್ಯವಸ್ಥೆ ಜಾರಿ :ಆರೋಗ್ಯ ಸಚಿವ ಡಾ. ಸುಧಾಕರ್...

ಆರೋಗ್ಯ ಇಲಾಖೆಯಲ್ಲಿ ಹಾಜರಾತಿ ಆಧರಿಸಿ ವೇತನ ಪಾವತಿ ವ್ಯವಸ್ಥೆ ಜಾರಿ :ಆರೋಗ್ಯ ಸಚಿವ ಡಾ. ಸುಧಾಕರ್ ಸೂಚನೆ

spot_img
- Advertisement -
- Advertisement -

ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಗುಣಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಎಲ್ಲಾ ಹಂತದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಯೋಮೆಟ್ರಿಕ್‌ ಹಾಜರಾತಿ ಆಧರಿಸಿ ವೇತನ ಪಾವತಿಸುವ ವ್ಯವಸ್ಥೆ ಕಡ್ಡಾಯಗೊಳಿಸಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಆಸ್ಪತ್ರೆ, ಇಲಾಖೆ ಕಚೇರಿ ಮತ್ತು ಸಂಸ್ಥೆಗಳಲ್ಲಿ ವೈದ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯದ ವೇಳೆಯಲ್ಲಿ ಹಾಜರಿಲ್ಲದಿರುವ ಬಗ್ಗೆ ಸಾರ್ವಜನಿಕರು ಹಾಗೂ ಚುನಾಯಿತ ಪ್ರತಿನಿಧಿಗಳಿಂದ ದೂರುಗಳು ಬಂದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ನಿಜವಾದ ಕಾರಣಗಳಿಲ್ಲದೇ ಕೆಲಸ ಕದಿಯುವುದನ್ನು ಸಹಿಸಲು ಆಗುವುದಿಲ್ಲ ಎಂದು ಹೇಳಿರುವ ಸಚಿವ ಸುಧಾಕರ್, ಅವರ ಕರ್ತವ್ಯಲೋಪದಿಂದ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಆಗುತ್ತದೆ. ಹೀಗಾಗಿ ಕರ್ತವ್ಯದ ವೇಳೆಯಲ್ಲಿ ಹಾಜರಿಲ್ಲದ ಯಾರೇ ಆಗಲಿ ಅಂತಹವರ ವೇತನ ಕಡಿತಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇಲಾಖೆ ಅಡಿಯಲ್ಲಿ ಬರುವ ಎಲ್ಲಾ ಸಂಸ್ಥೆಗಳು ಮತ್ತು ಆಸ್ಪತ್ರೆಗಳಲ್ಲಿ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಗೂ ಅವರ ಆಧಾರ್‌ ಆಧರಿತ ಬಯೋಮೆಟ್ರಿಕ್‌ ಹಾಜರಾತಿ (ಎಇಬಿಎಎಸ್‌) ಕಡ್ಡಾಯಗೊಳಿಸಲಾಗಿದೆ. ಅದನ್ನು ಆಧರಿಸಿಯೇ ಇನ್ನು ಮುಂದೆ ವೇತನ ನೀಡುವಂತೆ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ಡಾ. ಸುಧಾಕರ್ ಹೇಳಿದ್ದಾರೆ.

ಕೆಲವು ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಹಾಜರಾತಿ ದಾಖಲಿಸದಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈಗ ಸ್ಪಷ್ಟ ಎಚ್ಚರಿಕೆ ಜತೆಗೆ ಅಧಿಕೃತ ಆದೇಶ ನೀಡಿದ್ದುಅಂತಹ ಪ್ರಕರಣಗಳನ್ನು ಗೈರು ಹಾಜರಿ ಎಂದು ಪರಿಗಣಿಸಿ ವೇತನ ಕಡಿತಗೊಳಿಸಲಾಗುತ್ತದೆ ಎಂದು ಆರೋಗ್ಯ ಸಚಿವರು ಎಚ್ಚರಿಕೆ ನೀಡಿದ್ದಾರೆ.

- Advertisement -
spot_img

Latest News

error: Content is protected !!