Saturday, May 25, 2024
Homeತಾಜಾ ಸುದ್ದಿಈ ವರ್ಷ ಶಾಲಾ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ- ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ...

ಈ ವರ್ಷ ಶಾಲಾ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ- ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಇಲ್ಲ: ಬಿ.ಸಿ. ನಾಗೇಶ್

spot_img
- Advertisement -
- Advertisement -

ಬೆಂಗಳೂರು: ಈ ವರ್ಷ ಶಾಲಾ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ ಹಾಗೂ ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ. ಪರೀಕ್ಷೆಗೂ 75% ಹಾಜರಾತಿ ಕಡ್ಡಾಯ ಮಾಡುವುದಿಲ್ಲ. ಎಸ್‌.ಎಸ್‌.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದರು.

ಇನ್ನು ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿಯ ಬಗ್ಗೆ ತಜ್ಞರ ಸಲಹೆ ಮೇರೆಗೆ ಶಾಲೆ ಆರಂಭದ ಕುರಿತು ನಿರ್ಧಾರ ಮಾಡುತ್ತೇವೆ. ತಜ್ಞರು ಒಪ್ಪಿಗೆ ನೀಡಿದರೆ ಸೋಮವಾರದಿಂದ ಶಾಲೆ ಪ್ರಾರಂಭ ಮಾಡುತ್ತೇವೆ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!