- Advertisement -


- Advertisement -
ಪಡಿತರ ಚೀಟಿಗೆ ಸಂಬಂಧಿಸಿದ ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಸರ್ಕಾರ ತಿಳಿಸಿದೆ. ಆದರೆ ನವೆಂಬರ್ 30ರ ಬಳಿಕ ಯಾವುದೇ ಕಾರಣಕ್ಕೂ ಗಡುವು ವಿಸ್ತರಣೆ ಮಾಡುವುದಿಲ್ಲ ಎಂದು ಆಹಾರ ಇಲಾಖೆ ಸ್ಪಷ್ಟಪಡಿಸಿದೆ.
ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳು ನಿರಂತರವಾಗಿ ದೊರೆಯುವಂತೆ ಮಾಡಲು, ಇ-ಕೆವೈಸಿ ಬಾಕಿ ಉಳಿಸಿಕೊಂಡಿರುವ ಅರ್ಹ ಪಡಿತರ ಚೀಟಿದಾರರು ನಿಗದಿತ ಅವಧಿಯೊಳಗೆ ಕಡ್ಡಾಯವಾಗಿ ಮರು ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಇಲಾಖೆ ಸೂಚಿಸಿದೆ.
- Advertisement -


