Sunday, July 19, 2026
Homeತಾಜಾ ಸುದ್ದಿಎರಡು ವರ್ಷಗಳಿಂದ ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ ಮಾವನ ಖಾಸಗಿ ಅಂಗವನ್ನು ಕತ್ತರಿಸಿದ ಸೊಸೆ

ಎರಡು ವರ್ಷಗಳಿಂದ ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ ಮಾವನ ಖಾಸಗಿ ಅಂಗವನ್ನು ಕತ್ತರಿಸಿದ ಸೊಸೆ

- Advertisement -
- Advertisement -

ಉತ್ತರ ಪ್ರದೇಶದ ಮುಜಫರ್‌ನಗರ ಜಿಲ್ಲೆಯ ಬುಢಾನಾದಲ್ಲಿ ಅತ್ಯಂತ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ದಿನನಿತ್ಯದ ಕಿರುಕುಳದಿಂದ ಬೇಸತ್ತ ೨೩ ವರ್ಷದ ಸೊಸೆಯೊಬ್ಬಳು, ತನ್ನ 67 ವರ್ಷದ ಮಾವನ ಮೇಲೆಯೇ ಭೀಕರವಾಗಿ ದಾಳಿ ನಡೆಸಿದ್ದಾಳೆ. ಕೋಪದ ಕೈಗೆ ಬುದ್ಧಿ ಕೊಟ್ಟ ಮಹಿಳೆ, ಮಾವನ ಗುಪ್ತಾಂಗವನ್ನು ಬ್ಲೇಡ್‌ನಿಂದ ಕತ್ತರಿಸಿರುವ ಘಟನೆ ನಡೆದಿದೆ. ಸದ್ಯ ಗಾಯಾಳು ವೃದ್ಧನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.”

“ಮುಜಫರ್‌ನಗರದ ಬುಢಾನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 67 ವರ್ಷದ ಜಾಕಿರ್ ಎಂಬುವವರ ಮೇಲೆಯೇ ಅವರ ಸೊಸೆ ಸೈಯದಾ(23) ಬ್ಲೇಡ್‌ನಿಂದ ಹಲ್ಲೆ ನಡೆಸಿದ್ದಾಳೆ. ಮನೆಯಲ್ಲಿ ನಿರಂತರವಾಗಿ ನಡೆಯುತ್ತಿದ್ದ ಕೌಟುಂಬಿಕ ಕಲಹ ಹಾಗೂ ಕಿರುಕುಳವೇ ಈ ಘಟನೆಗೆ ಕಾರಣ ಎನ್ನಲಾಗಿದೆ. ದಿನನಿತ್ಯದ ಟಾರ್ಚರ್‌ನಿಂದ ತೀವ್ರ ಆಕ್ರೋಶಗೊಂಡಿದ್ದ ಸೈಯದಾ, ಮಾವನ ಖಾಸಗಿ ಅಂಗವನ್ನು ಬ್ಲೇಡ್ ನಿಂದ ಕತ್ತರಿಸಿದ್ದಾಳೆ.”

“ದಾಳಿಯಿಂದಾಗಿ ತೀವ್ರ ರಕ್ತಸ್ರಾವಕ್ಕೊಳಗಾಗಿದ್ದ ವೃದ್ಧ ಜಾಕಿರ್ ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರಿಗೆ ವೈದ್ಯರು ತುರ್ತು ಚಿಕಿತ್ಸೆ ನೀಡುತ್ತಿದ್ದಾರೆ. ಇತ್ತ ಘಟನೆ ನಡೆದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಬುಢಾನಾ ಪೊಲೀಸರು, ಆರೋಪಿ ಮಹಿಳೆ ಸೈಯದಾಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕೌಟುಂಬಿಕ ಕಿರುಕುಳದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆಯೇ ಅಥವಾ ಇದರ ಹಿಂದೆ ಬೇರೆ ಏನಾದರೂ ಕಾರಣವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.”

- Advertisement -

Latest News

error: Content is protected !!