Saturday, April 20, 2024
Homeಕ್ರೀಡೆಮೊದಲ ಏಕದಿನ ಪಂದ್ಯ: ಭಾರತದ ವಿರುದ್ಧ ಆಸ್ಟ್ರೇಲಿಯಕ್ಕೆ 66 ರನ್ ಗಳ ಗೆಲುವು

ಮೊದಲ ಏಕದಿನ ಪಂದ್ಯ: ಭಾರತದ ವಿರುದ್ಧ ಆಸ್ಟ್ರೇಲಿಯಕ್ಕೆ 66 ರನ್ ಗಳ ಗೆಲುವು

spot_img
- Advertisement -
- Advertisement -

ಸಿಡ್ನಿ: ಶಿಖರ್ ಧವನ್ ಹಾಗೂ ಹಾರ್ದಿಕ್ ಪಾಂಡ್ಯ ಹೋರಾಟದ ಹೊರತಾಗಿಯೂ ಭಾರತ ತಂಡವು ಆಸ್ಟ್ರೇಲಿಯದ ವಿರುದ್ಧ ಮೊದಲ ಏಕದಿನ ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ 66 ರನ್ ಗಳ ಸೋಲುಂಡಿದೆ.

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಶುಕ್ರವಾರ ನಡೆದ ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ, ನಾಯಕ ಆರನ್ ಫಿಂಚ್ (114ರನ್) ಹಾಗೂ ಸ್ಟೀವನ್ ಸ್ಮಿತ್ (105ರನ್) ಜೋಡಿಯ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ 6 ವಿಕೆಟ್ 374 ರನ್ ಪೇರಿಸಿತು. ಪ್ರತಿಯಾಗಿ ಭಾರತ ತಂಡ ಹಾರ್ದಿಕ್ ಪಾಂಡ್ಯ (90 ರನ್) ಏಕಾಂಗಿ ನಿರ್ವಹಣೆ ನಡುವೆಯೂ 8 ವಿಕೆಟ್‌ಗೆ 308 ರನ್‌ಗಳಿಸಲಷ್ಟೇ ಶಕ್ತವಾಯಿತು.

ಭಾರತದ ಬೌಲಿಂಗ್ ವಿಭಾಗದಲ್ಲಿ ಮುಹಮ್ಮದ್ ಶಮಿ(3-59)ಯಶಸ್ವಿ ಬೌಲರ್ ಎನಿಸಿಕೊಂಡರು. 375 ರನ್ ಗಳ ಗುರಿ ಪಡೆದ ಭಾರತ ತಂಡವು ಉತ್ತಮ ಆರಂಭ ಪಡೆಯಿತಾದರೂ ಬಳಿಕ 100 ರನ್ ಆಗುವಷ್ಟರಲ್ಲಿ ಪ್ರಮುಖ 4 ವಿಕೆಟ್ ಕಳೆದು ಸಂಕಷ್ಟಕ್ಕೆ ಸಿಲುಕಿತು. ಈ ಸಂದರ್ಭ ಶಿಖರ್ ಧವನ್ ಹಾಗೂ ಹಾರ್ದಿಕ್ ಪಾಂಡ್ಯ ಉತ್ತಮ ಜೊತೆಯಾಟ (146)ದ ಮೂಲಕ ತಂಡವನ್ನು ಆಧರಿಸಿದರು. ಧವನ್ 74 ( 86 ಎಸೆತ) ರನ್ ಗಳಿಸಿ ಔಟಾದರೆ, ಪಾಂಡ್ಯ 76 ಎಸೆತಗಳಲ್ಲಿ 90 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇವರಿಬ್ಬರ ನಿರ್ಗಮನದ ಬಳಿಕ ತಂಡ ಸೋಲಿನತ್ತ ಮುಖ ಮಾಡಿತು.

ಅಂತಿಮವಾಗಿ ಭಾರತ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 308 ರನ್ ಗಳಿಸಿ 66 ರನ್ ಗಳ ಸೋಲು ಕಂಡಿತು. ವಿರಾಟ್ ಕೊಹ್ಲಿ 21, ಅಗರವಾಲ್ 22, ಜಡೇಜ 25, ಸೈನಿ 29 ರನ್ ಗಳಿಸಿದರು.

ಆಸ್ಟ್ರೇಲಿಯ ಪರ ಆಯಡಮ್ ಝಾಂಪ 4, ಜೋಶ್ ಹ್ಯಾಝ್ಲೆವುಡ್ 3 ವಿಕೆಟ್ ಪಡೆದರು. ಭರ್ಜರಿ ಶತಕ ಸಿಡಿಸಿದ ಸ್ಟೀವನ್ ಸ್ಮಿತ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು. ಇದರೊಂದಿಗೆ ಭಾರತ ತಂಡ ಮೂರು ಪಂದ್ಯಗಳ ಸರಣಿಯಲ್ಲಿ 0-1 ರಿಂದ ಹಿನ್ನಡೆ ಸಾಧಿಸಿತು. ಉಭಯ ತಂಡಗಳ ನಡುವಿನ 2ನೇ ಏಕದಿನ ಭಾನುವಾರ ಸಿಡ್ನಿ ಮೈದಾನದಲ್ಲೇ ನಡೆಯಲಿದೆ.

- Advertisement -
spot_img

Latest News

error: Content is protected !!