Saturday, June 13, 2026
Homeಉತ್ತರ ಕನ್ನಡರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ರಿಕ್ಷಾ ಡಿಕ್ಕಿಯಾಗಿ ನಾಲ್ಕು ತಿಂಗಳ ಗರ್ಭಿಣಿ ಸ್ಥಳದಲ್ಲೇ ಸಾವು

ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ರಿಕ್ಷಾ ಡಿಕ್ಕಿಯಾಗಿ ನಾಲ್ಕು ತಿಂಗಳ ಗರ್ಭಿಣಿ ಸ್ಥಳದಲ್ಲೇ ಸಾವು

- Advertisement -
- Advertisement -

ಉತ್ತರಕನ್ನಡ; ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ರಿಕ್ಷಾ ಡಿಕ್ಕಿಯಾಗಿ ನಾಲ್ಕು ತಿಂಗಳ ಗರ್ಭಿಣಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡದ ಅಂಕೋಲಾದ ಬಾವಿಕೇರಿಯಲ್ಲಿ ನಡೆದಿದೆ. ಶೋಭಾ ಗೋಪಾಲ ನಾಯಕ(28) ಮೃತ ಮಹಿಳೆ.

ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಈಕೆ ತನ್ನ ಮನೆ ಮುಂದಿನ ಡಾಂಬರು ರಸ್ತೆ ಪಕ್ಕದ ಮಣ್ಣಿನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಆಟೊ ರಿಕ್ಷಾ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದಿದೆ.ಇದರಿಂದ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳದಿಂದ ಚಾಲಕ ಪರಾರಿಯಾಗಿದ್ದ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!