Wednesday, June 24, 2026
Homeಕರಾವಳಿಮಂಗಳೂರುಪುತ್ತೂರು; ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಇಬ್ಬರು ಸಂಚಾರಿ ಪೊಲೀಸರು ಅಮಾನತು

ಪುತ್ತೂರು; ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಇಬ್ಬರು ಸಂಚಾರಿ ಪೊಲೀಸರು ಅಮಾನತು

- Advertisement -
- Advertisement -

ಪುತ್ತೂರು; ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಸಂಚಾರಿ ಪೊಲೀಸರನ್ನು ಅಮಾನತು ಮಾಡಲಾಗಿದೆ. ಪುತ್ತೂರು ಸಂಚಾರ ಪೊಲೀಸ್‌ ಠಾಣಾ  ಶ್ರೀ ಚಿದಾನಂದ ರೈ, ಎ.ಎಸ್.ಐ ಮತ್ತು ಸಿಪಿಸಿ 2283,  ಶ್ರೀ ಶೈಲ ಎಂ ಕೆ ಅಮಾನತುಕೊಂಡವರು.

ಪ್ರಕರಣದ ವಿವರ;

ದಿನಾಂಕ: 17-10-2025 ರಂದು ಸಂಜೆ ಆಟೋ ಚಾಲಕ ಬಶೀರ್ ಕುರಿಯ ಗ್ರಾಮ ಎಂಬವರು ಸಮವಸ್ತ್ರ ಧರಿಸಿದೇ ಆಟೋ ಚಲಾಯಿಸಿಕೊಂಡು ಬರುತ್ತಿರುವಾಗ, ಕರ್ತವ್ಯದಲ್ಲಿದ್ದ ಪುತ್ತೂರು ಸಂಚಾರ ಪೊಲೀಸ್‌ ಠಾಣಾ  ಶ್ರೀ ಚಿದಾನಂದ ರೈ, ಎ.ಎಸ್.ಐ ಮತ್ತು ಸಿಪಿಸಿ 2283,  ಶ್ರೀ ಶೈಲ ಎಂ ಕೆ,  ಕೈ ಸನ್ನೆ ಮೂಲಕ ನಿಲ್ಲಿಸಲು ಸೂಚಿಸಿದ್ದರೂ, ಆತನು ತನ್ನ ವಾಹನವನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿಕೊಂಡು ಬಂದು ಮೋಟಾರ್ ವಾಹನ ಕಾಯ್ದೆ ಉಲ್ಲಂಘಿಸಿದ್ದರು. ಈ ಕುರಿತು ಆತನನ್ನು ಹಿಂಬಾಲಿಸಿ ವಾಹನವನ್ನು ತಡೆದು ಆತನನ್ನು  ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈಯಿಂದ ಹಲ್ಲೆ ಮಾಡಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್‌ ಆಗಿದೆ.  ಇದನ್ನು ಪರಿಶೀಲಿಸಿ    ಶ್ರೀ ಚಿದಾನಂದ ರೈ, ಎ.ಎಸ್.ಐ ಮತ್ತು ಸಿಪಿಸಿ 2283,  ಶ್ರೀ ಶೈಲ ಎಂ ಕೆ ರವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

- Advertisement -

Latest News

error: Content is protected !!