- Advertisement -
![]()
- Advertisement -
ನೆಲ್ಯಾಡಿ: ಆಟೋ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿರಾಡಿ ಗ್ರಾಮದ ಅಡ್ಡಹೊಳೆಯ ಅನಿತೋಟ ಎಂಬಲ್ಲಿ ನಡೆದಿದೆ. ಆಟೋ ಚಾಲಕ ಹರಿದಾಸ (63) ಮೃತ ಆಟೋ ಚಾಲಕ.
ಹರಿದಾಸ ಅವರು ಮೇ.3ರ ರಾತ್ರಿ ಎಂದಿನಂತೆ ಊಟ ಮಾಡಿ ಮನೆಯಲ್ಲಿ ಮಲಗಿದ್ದರು. ಆದರೆ ಸೋಮವಾರ ಬೆಳಿಗ್ಗೆ ಮನೆಯವರು ಎದ್ದು ನೋಡಿದಾಗ ಅವರು ಮನೆಯಲ್ಲಿ ಕಾಣಿಸದೇ ಇದ್ದರು. ಇದರಿಂದ ಆತಂಕಗೊಂಡ ಕುಟುಂಬಸ್ಥರು ಸುತ್ತಮುತ್ತ ಹುಡುಕಾಟ ನಡೆಸಿದ ವೇಳೆ, ಮನೆಯಿಂದ ಸುಮಾರು 20 ಮೀಟರ್ ದೂರದಲ್ಲಿರುವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದಾರೆ.
- Advertisement -


