Thursday, June 4, 2026
Homeಕರಾವಳಿಮಂಗಳೂರು; ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಮಂಗಳೂರು; ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು

- Advertisement -
- Advertisement -

ಮಂಗಳೂರು; ಆಟೋ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಳ್ಳಾಲ ಕುಂಪಲ ದ ಲಕ್ಷ್ಮಿ ಗುಡ್ಡೆ ಎಂಬಲ್ಲಿ ನಡೆದಿದೆ. ಕುಂಪಲ ಆಶ್ರಯ ಕಾಲನಿ ನಿವಾಸಿ ಧನರಾಜ್ ಪೂಜಾರಿ(32) ಮೃತ ಆಟೋ ಚಾಲಕ.

ಆಶ್ರಯ ಕಾಲೋನಿಯಲ್ಲಿ ನೆಲೆಸಿದ್ದ ಧನರಾಜ್ ಕುಟುಂಬವು ಮನೆ ನವೀಕರಣ ಹಿನ್ನೆಲೆಯಲ್ಲಿ ಸಮೀಪದ ಲಕ್ಷ್ಮೀಗುಡ್ಡೆಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಅವಿವಾಹಿತರಾಗಿದ್ದ ಧನರಾಜ್ ದೇರಳಕಟ್ಟೆಯ ಯೆನೆಪೋಯ ರಿಕ್ಷಾ ಪಾರ್ಕಲ್ಲಿ ಆಟೋ ರಿಕ್ಷಾ ಓಡಿಸುತ್ತಿದ್ದರು. ಧನರಾಜ್ ತಾಯಿ ಕೆಲಸ ಮುಗಿಸಿ ಮನೆಗೆ ಬಂದಾಗ ಧನರಾಜ್ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ರಿಕ್ಷಾ ಚಾಲಕರಾಗಿದ್ದ ಮೃತ ಧನರಾಜ್ ತಂದೆ ಲಿಂಗಪ್ಪ ಪೂಜಾರಿ ಅನಾರೋಗ್ಯಕ್ಕೀಡಾದ ಹಿನ್ನೆಲೆಯಲ್ಲಿ ಧನರಾಜ್ ಮನನೊಂದು ಆತ್ಮಹತ್ಯೆಗೈದಿದ್ದಾರೆ ಎನ್ನಲಾಗಿದೆ. ಹಿಂದೂ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಧನರಾಜ್ ತಂದೆ,ತಾಯಿ,ಸಹೋದರನನ್ನು ಅಗಲಿದ್ದಾನೆ.ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡೆಇಕೊಂಡಿದ್ದಾರೆ.

- Advertisement -

Latest News

error: Content is protected !!