- Advertisement -
- Advertisement -
ಪುತ್ತೂರು: ಎಲೆಕ್ಟ್ರಿಕ್ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿರುವ ಘಟನೆ ಪುತ್ತೂರಿನ ಬೈಪಾಸ್ ನಲ್ಲಿ ನಡೆದಿದೆ. ಸೂರ್ಯ ಮೃತ ಚಾಲಕ.
ಸೂರ್ಯ ಅವರು ಓಡಿಸುತ್ತಿದ್ದ ರಿಕ್ಷಾಕ್ಕೆ ನಾಯಿಯೊಂದು ಅಡ್ಡ ಬಂದಿದೆ. ಪರಿಣಾಮ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿದೆ. ತಕ್ಷಣವೇ ರಿಕ್ಷಾದಲ್ಲಿದ್ದ ಇಬ್ಬರು ಪ್ರಯಾಣಿಕ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಚಾಲಕ ಸೂರ್ಯ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅಲ್ಲಿ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
- Advertisement -