Friday, June 5, 2026
Homeಕರಾವಳಿಕಾಸರಗೋಡುನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಸಾವು

ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಸಾವು

- Advertisement -
- Advertisement -

ಕಾಸರಗೋಡು; ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಮುದೆ ಬಳಿ ನಡೆದಿದೆ.ಚೇವಾರ್ ಮಿತ್ತಡ್ಕ ನಿವಾಸಿ ಕಿಶೋರ್ ಯಾನೆ ಪ್ರಕಾಶ್ ಸಿ.ಎಚ್.(34) ಮೃತ ದುರ್ದೈವಿ.

ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಕಿಶೋರ್ ಬಾಡಿಗೆಗೆ ತೆರಳಿ ಮರಳುತ್ತಿದ್ದಾಗ ರಸ್ತೆ ಬದಿ ಇಡಲಾಗಿದ್ದ ಇಂಟರ್ ಲಾಕ್ ಗೆ ಬಡಿದ ಆಟೋ ರಿಕ್ಷಾ ಮಗುಚಿ ಬಿದ್ದಿದೆ ಎನ್ನಲಾಗಿದೆ.ಈ ವೇಳೆ ರಿಕ್ಷಾದಡಿ ಸಿಲುಕಿದ್ದ ಕಿಶೋರ್ ರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ.  ಈ ಬಗ್ಗೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

- Advertisement -

Latest News

error: Content is protected !!