Friday, June 5, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಬದ್ಯಾರ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾ ಪಲ್ಟಿ, ಚಾಲಕ ಸಾವು

ಬೆಳ್ತಂಗಡಿ : ಬದ್ಯಾರ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾ ಪಲ್ಟಿ, ಚಾಲಕ ಸಾವು

- Advertisement -
- Advertisement -

ಬೆಳ್ತಂಗಡಿ : ಬದ್ಯಾರ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾವೊಂದು ಮಗುಚಿ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ಮೃತಪಟ್ಟ ಘಟನೆ ಜೂ.22 ರಂದು ಸಂಭವಿಸಿದೆ.

ಮೃತಪಟ್ಟ ಆಟೋ‌ ಚಾಲಕ ಬೆಳ್ತಂಗಡಿ ತಾಲೂಕಿನ ಮಾಲಾಡಿ ನಿವಾಸಿ ಶಿವಾನಂದ ಪಿ ಮಾಳವ (33) ಎಂಬವರಾಗಿದ್ದಾರೆ.

ಗುರುವಾಯನಕೆರೆಯಿಂದ ಅಳದಂಗಡಿ ಗೆ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕೂಡಲೇ ಗಂಭೀರವಾಗಿ ಗಾಯಗೊಂಡ ಇವರನ್ನು ಸ್ಥಳೀಯರ ಸಹಕಾರದೊಂದಿಗೆ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದರೂ ಆವೇಳೆಗೆ ಮೃತ ಪಟ್ಟಿದ್ದ ಎನ್ನಲಾಗಿದೆ. ಆಟೋದಲ್ಲಿದ್ದ ಶಿವರಾಜ್ ಎಂಬವರು ಗಾಯಗೊಂಡಿದ್ದು ಆವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!