Thursday, June 4, 2026
Homeಕರಾವಳಿಬಂಟ್ವಾಳ; ಕಾರಿನೊಳಗೆ ಕುಳಿತ ಸ್ಥಿತಿಯಲ್ಲಿಯೇ ಯುವಕನ ಶವ ಪತ್ತೆ

ಬಂಟ್ವಾಳ; ಕಾರಿನೊಳಗೆ ಕುಳಿತ ಸ್ಥಿತಿಯಲ್ಲಿಯೇ ಯುವಕನ ಶವ ಪತ್ತೆ

- Advertisement -
- Advertisement -

ಬಂಟ್ವಾಳ; ಕಾರಿನೊಳಗೆ ಕುಳಿತ ಸ್ಥಿತಿಯಲ್ಲಿಯೇ ಯುವಕನ ಶವ ಪತ್ತೆಯಾಗಿರುವ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.ಗೋಳ್ತಮಜಲು ಗ್ರಾಮದ ‌ಹೊಸೈಮಾರ್ ನಿವಾಸಿ ಜಗದೀಶ್ ಮೃತ ಯುವಕ. ವೃತ್ತಿಯಲ್ಲಿ ಚಾಲಕನಾಗಿದ್ದ ಜಗದೀಶ್ ಕಳೆದ ಕೆಲವು ವರ್ಷಗಳಿಂದ ವಿಡಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದರು.

ಮಾ.12ರಂದು ರ ಬೆಳಿಗ್ಗೆ ತನ್ನ ಬಾವನ ಜೊತೆ ತರವಾಡು ಮನೆಯಲ್ಲಿ ದೈವದ ಕಾರ‍್ಯಕ್ಕೆ ಮಕ್ಕಳ ಜೊತೆ ಹೋಗಿ ವಾಪಾಸ್ ಮನೆಗೆ ಬರುವ ವೇಳೆ ಕಲ್ಲಡ್ಕ ತಲುಪಿದಾಗ ಮಧ್ಯಾಹ್ನ ಸುಮಾರು 1-30 ಆಗಿತ್ತು. ಈ ವೇಳೆ ಜಗದೀಶ್ ತನ್ನ ಬಾವನಲ್ಲಿ, ನನಗೆ ಕಾರು ಚಲಾಯಿಸಲು ‌ಕಷ್ಟವಾಗುತ್ತಿದೆ. ನಾನು ಮನೆಗೆ ಮತ್ತೆ ಬರುತ್ತೇನೆ. ನೀವು‌‌ ಮಕ್ಕಳ ಜೊತೆ ಮನೆಗೆ ಹೋಗಿ ಎಂದು ಹೇಳಿ ‌ಕಳುಹಿಸಿ ಕಾರಿನ ಸೀಟಿನಲ್ಲಿಯೇ ಮಲಗಿದ್ದರು ಎನ್ನಲಾಗಿದೆ.

ಆದರೆ ರಾತ್ರಿ ‌7 ಗಂಟೆಯಾದರೂ ಈತ ಮನೆಗೆ ಬಾರದ ಹಿನ್ನೆಲೆ ಮತ್ತೆ ಬಂದು ನೋಡಿದಾಗ ಕಾರಿನ ಸೀಟಿನಲ್ಲಿ ಕುಳಿತ ಸ್ಥಿತಿಯಲ್ಲಿರುವುದು ಹೊರಗಿನಿಂದ ಕಂಡು ಬಂದಿದೆ. ಕಾರಿನ ಗ್ಲಾಸ್ ಹಾಕಿ ಮಲಗಿದ್ದರಿಂದ ಕಾರಿನ ಡೋರ್ ಓಪನ್ ಮಾಡಿದಾಗ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ. ಕಾರಿನ ಕಿಟಕಿ, ಬಾಗಿಲನ್ನು ಮುಚ್ಚಿ ಮಲಗಿದ್ದರಿಂದ ಗಾಳಿ ಇಲ್ಲದೆ ಸಾವನ್ನಪಿರಬಹುದೆ? ಅಥವಾ ಅನಾರೋಗ್ಯದಿಂದ ಮೃತಪಟ್ಟಿರಬಹುದಾ ಎಂಬುದು ವೈದ್ಯಕೀಯ ವರದಿ ಹಾಗೂ ಪೊಲೀಸ್ ತನಿಖೆ ಬಳಿಕ ತಿಳಿದು ಬರಬೇಕಿದೆ.

- Advertisement -

Latest News

error: Content is protected !!