Tuesday, June 23, 2026
Homeಕರಾವಳಿವಿಟ್ಲ: ಅಪ್ರಾಪ್ತ ಬಾಲಕಿಗೆ ಕಿರುಕುಳ ಆರೋಪ: ಆರೋಪಿಯನ್ನು ಬಂಧಿಸಿದ ಪೊಲೀಸರು

ವಿಟ್ಲ: ಅಪ್ರಾಪ್ತ ಬಾಲಕಿಗೆ ಕಿರುಕುಳ ಆರೋಪ: ಆರೋಪಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ವಿಟ್ಲ: ಅಪ್ರಾಪ್ತ ಬಾಲಕಿಗೆಯೋರ್ವಳಿಗೆ ಕಿರುಕುಳ ನೀಡಿದ ಆರೋಪದಡಿ ವ್ಯಕ್ತಿಯೋರ್ವನನ್ನು ವಿಟ್ಲ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಸಫ್ವಾನ್ ಬಂಧಿತ ಆರೋಪಿ.ಸಫ್ವಾನ್ ಕೆಲ ಸಮಯಗಳ ಹಿಂದಷ್ಟೇ ಲೈಂಗಿಕ ಕಿರುಕುಳ, ಜೀವಬೆದರಿಕೆ ಪ್ರಕರಣದಡಿ ಬಂಧಿತನಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದನು.ಜೈಲಿನಿಂದ ಹೊರ ಬರುತ್ತಿದ್ದಂತೆ ತನ್ನ ಹಳೆ ಚಾಳಿ ಮುಂದುವರೆಸಿದ್ದಾನೆ.

ಸಫ್ವಾನ್ ಶಾಲಾ ಬಾಲಕಿಯನ್ನು ಹಿಂಬಾಲಿಸಿ ಆಕೆಗೆ ಕಿರುಕುಳ ನೀಡಿ ಜೀವಬೆದರಿಕೆ ಹಾಕಿದ್ದಾನೆನ್ನಲಾಗಿದೆ. ಈ ಬಗ್ಗೆ ಬಾಲಕಿ ನೀಡಿದ ದೂರಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!