Monday, June 8, 2026
Homeಕರಾವಳಿಉಡುಪಿಪಡುಬಿದ್ರಿ: ಸಾಲ ಮರುಪಾವತಿಸಲಾಗದೆ ಮನನೊಂದು ಆತ್ಮಹತ್ಯೆಗೆ ಶರಣಾದ ಆಟೋ ಚಾಲಕ!…

ಪಡುಬಿದ್ರಿ: ಸಾಲ ಮರುಪಾವತಿಸಲಾಗದೆ ಮನನೊಂದು ಆತ್ಮಹತ್ಯೆಗೆ ಶರಣಾದ ಆಟೋ ಚಾಲಕ!…

- Advertisement -
- Advertisement -

ಪಡುಬಿದ್ರಿ: ನಡ್ಸಾಲು ಗ್ರಾಮದ ಪಡುಬಿದ್ರಿಯಲ್ಲಿ ಆಟೋ ಚಾಲಕರೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಕೊರೊನಾ ಕಾರಣದಿಂದ ದುಡಿಮೆ ಕೈಕೊಟ್ಟ ಕಾರಣ ಸಾಲವನ್ನು ಮರುಪಾವತಿಸಲು ಆಗದೆ ಮನನೊಂದು ಮಾಡಿಕೊಂಡಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ರಿಕ್ಷಾ ಚಾಲಕನನ್ನು ನಿವಾಸಿ ಎಮ್ ಸತೀಶ್ ಪೂಜಾರಿ (58) ಎಂದು ಗುರುತಿಸಲಾಗಿದೆ.

ಅ.27ರಂದು ಸತೀಶ್ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ ಮಾಡಿದ್ದು ಅವರನ್ನು ಚಿಕಿತ್ಸೆಗೆಂದು ಉಡುಪಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!