Thursday, April 25, 2024
Homeಕರಾವಳಿಮಂಗಳೂರಿನಲ್ಲಿ ರಿಕ್ಷಾದಲ್ಲಿ ಸ್ಫೋಟ ಪ್ರಕರಣ; ಆಟೋ ಚಾಲಕನಿಗೆ ಪರಿಹಾರ ನೀಡಲು ಸರಕಾರಕ್ಕೆ ಜಿಲ್ಲಾಡಳಿತ ಶಿಫಾರಸ್ಸು

ಮಂಗಳೂರಿನಲ್ಲಿ ರಿಕ್ಷಾದಲ್ಲಿ ಸ್ಫೋಟ ಪ್ರಕರಣ; ಆಟೋ ಚಾಲಕನಿಗೆ ಪರಿಹಾರ ನೀಡಲು ಸರಕಾರಕ್ಕೆ ಜಿಲ್ಲಾಡಳಿತ ಶಿಫಾರಸ್ಸು

spot_img
- Advertisement -
- Advertisement -

ಮಂಗಳೂರು: ನಾಗುರಿಯಲ್ಲಿ ಆಟೋದಲ್ಲಿ ಕಳೆದ ಶನಿವಾರ ನಡೆದ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿರುವ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಪರಿಹಾರ ನೀಡಲು ಸರಕಾರಕ್ಕೆ ಜಿಲ್ಲಾಡಳಿತ ಶಿಫಾರಸ್ಸು ಮಾಡಲಿದೆ ಎಂದು ದ.ಕನ್ನಡ ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್ ಹೇಳಿದ್ದಾರೆ.

ಪುರುಷೋತ್ತಮ್ 25 ವರ್ಷಗಳಿಂದ ಆಟೋ ರಿಕ್ಷಾ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ಮಂಗಳೂರಿನ ಗೋರಿಗುಡ್ಡದಲ್ಲಿ ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳೊಂದಿಗೆ ವಾಸವಾಗಿದ್ದಾರೆ. ಹಿರಿಯ ಮಗಳು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ಕಿರಿಯ ಮಗಳು ಸಿಎ ಪರೀಕ್ಷೆ ಬರೆದಿದ್ದಾರೆ. ಪತ್ನಿ ಮನೆ ನಿರ್ವಹಣೆ ಮಾಡುತ್ತಿದ್ದಾರೆ.

ಪುರುಷೋತ್ತಮ್ ಕುಟುಂಬಕ್ಕೆ ಆಟೋ ರಿಕ್ಷಾವೇ ಪ್ರಮುಖ ಆಧಾರವಾಗಿತ್ತು. ರಿಕ್ಷಾದಲ್ಲಿ ದುಡಿದೇ ಮಕ್ಕಳಿಗೆ ವಿದ್ಯಾಭ್ಯಾಸ ನೀಡಿದ್ದಾರೆ. ಘಟನೆಯಿಂದ ಆಟೋಗೆ ಹಾನಿಯಾಗಿರುವುದು ಮಾತ್ರವಲ್ಲದೆ, ತನಿಖೆ ಕಾರಣಕ್ಕಾಗಿ ಸದ್ಯ ಪೊಲೀಸರು ವಾಪಸು ನೀಡುವ ಸಾಧ್ಯತೆ ಕಡಿಮೆ. ಹಿರಿಯ ಮಗಳಿಗೆ ಮದುವೆ ಕೂಡ ನಿಶ್ಚಯ ಆಗಿದ್ದು ಇಂತಹ ಸಂದರ್ಭದಲ್ಲೇ ಘಟನೆ ನಡೆದಿರುವುದು ಕುಟುಂಬವನ್ನು ಕಂಗೆಡುವಂತೆ ಮಾಡಿದೆ. ಹಾಗಾಗಿ ಅವರಿಗೆ ಸೂಕ್ತ ಪರಿಹಾರ ನೀಡಲು ಸರಕಾರಕ್ಕೆ ಜಿಲ್ಲಾಡಳಿತ ಶಿಫಾರಸ್ಸು ಮಾಡಲಿದೆ ಎಂದು ದ.ಕನ್ನಡ ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್ ಹೇಳಿದ್ದಾರೆ.

- Advertisement -
spot_img

Latest News

error: Content is protected !!