Wednesday, October 14, 2026
Homeಕರಾವಳಿಸ್ಕೂಟರ್‌ಗೆ ಢಿಕ್ಕಿ ಹೊಡೆದ ಆಟೋ ರಿಕ್ಷಾ: ಗಾಯಗೊಂಡ ಸವಾರ 

ಸ್ಕೂಟರ್‌ಗೆ ಢಿಕ್ಕಿ ಹೊಡೆದ ಆಟೋ ರಿಕ್ಷಾ: ಗಾಯಗೊಂಡ ಸವಾರ 

- Advertisement -
- Advertisement -

ಪುತ್ತೂರು : ಆಟೋ ರಿಕ್ಷಾವೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ ಸವಾರ ರಸ್ತೆಗೆ ಬಿದ್ದು ಗಾಯಗೊಂಡ ಘಟನೆ ಸಂಪ್ಯ ಬಳಿ ಕಲ್ಲರ್ಪೆಯಲ್ಲಿ ನಡೆದಿದೆ.

ಘಟನೆಯಲ್ಲಿ ಪುತ್ತೂರು ನಿವಾಸಿ ಕನಿಷ್ಕ ಶೆಟ್ಟಿ (25) ಎಂಬವರು ಗಾಯಗೊಂಡಿದ್ದಾರೆ. 

ಸ್ಕೂಟರ್‌ನಲ್ಲಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಪ್ಯ ಬಳಿ ಕಲ್ಲರ್ಪೆ ಎಂಬಲ್ಲಿಗೆ ತಲುಪಿದಾಗ ಆರೋಪಿ ರಿಕ್ಷಾ ಚಾಲಕನು ನಿರ್ಲಕ್ಷ್ಯತನದಿಂದ ಚಲಾಯಿಸಿ ಸ್ಕೂಟರ್‌ಗೆ ಢಿಕ್ಕಿ ಮಾಡಿದ್ದು ಪರಿಣಾಮ ಸವಾರ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಾಯಗಳಾಗಿದ್ದು ಬಳಿಕ ಪುತ್ತೂರು ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಈ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!