Sunday, June 7, 2026
Homeಕರಾವಳಿಬಂಟ್ವಾಳ: ಆಟೋ ರಿಕ್ಷಾ ಪಲ್ಟಿಯಾಗಿ ಓರ್ವ ಸಾವು;7 ಮಂದಿಗೆ ಗಾಯ

ಬಂಟ್ವಾಳ: ಆಟೋ ರಿಕ್ಷಾ ಪಲ್ಟಿಯಾಗಿ ಓರ್ವ ಸಾವು;7 ಮಂದಿಗೆ ಗಾಯ

- Advertisement -
- Advertisement -

ಬಂಟ್ವಾಳ: ಏಳು ಮಂದಿ ಪ್ರಯಾಣಿಕರನ್ನು ಹೊತ್ತು ಸಂಚರಿಸುತ್ತಿದ್ದ ಆಟೋ ರಿಕ್ಷಾವೊಂದು ಪಲ್ಟಿಯಾಗಿ ಓರ್ವ ಸಾವನಪ್ಪಿರುವ ಘಟನೆ ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.

ವಲೆಂಗೂರು ನಿವಾಸಿ ಫ್ರಾನ್ಸಿಸ್ ಸುವಾರಿಸ್ (85)ಮೃತಪಟ್ಟ ದುರ್ದೈವಿ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡ ಪರಿಣಾಮ ಮಂಗಳೂರು ಖಾಸಗಿ ಆಸ್ಪತ್ರೆ ಗೆ ದಾಖಲಿಸಲಾಗಿದೆ. ಅಲ್ಪಸ್ವಲ್ಪ ಗಾಯಗೊಂಡ ಉಳಿದವರನ್ನು ಬಂಟ್ವಾಳ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಸರಪಾಡಿಯಿಂದ ಬಂಟ್ವಾಳ ಕಡೆಗೆ ಹಲವು ಮಂದಿ ಪ್ರಯಾಣಿಕರನ್ನು ಕರೆತರುವ ವೇಳೆ ಅಟೋರಿಕ್ಷವು ಪರಿಯಪಾದೆ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಹೇಳಲಾಗಿದೆ.

- Advertisement -

Latest News

error: Content is protected !!