Monday, May 6, 2024
Homeಕ್ರೀಡೆಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಐತಿಹಾಸಿಕ ದಾಖಲೆ ನಿರ್ಮಿಸಿದ ಅವನಿ ಲೇಖರಾ:ಒಂದೇ ಕ್ರೀಡಾಕೂಟದಲ್ಲಿ ಎರಡು ಪದಕ

ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಐತಿಹಾಸಿಕ ದಾಖಲೆ ನಿರ್ಮಿಸಿದ ಅವನಿ ಲೇಖರಾ:ಒಂದೇ ಕ್ರೀಡಾಕೂಟದಲ್ಲಿ ಎರಡು ಪದಕ

spot_img
- Advertisement -
- Advertisement -

ಟೋಕಿಯೊ: ಪ್ಯಾರಾಲಿಂಪಿಕ್ಸ್ 2020ರಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟ ಅವನಿ ಲೆಕೇರಾ ಈಗ ಮತ್ತೊಂದು ಪದಕಕ್ಕೆ ಮುತ್ತಿಕ್ಕಿದ್ದಾರೆ.ಮಹಿಳೆಯರ 50 ಮೀಟರ್​ನ ರೈಫಲ್ 3 ಪೊಸಿಶನ್ಸ್ ಎಸ್ ಎಚ್ 1ರ ವಿಭಾಗದ ಶೂಟಿಂಗ್ ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಪಡೆದು ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದಾರೆ.

ಈ ಮೂಲಕ ಇನ್ನು ಕ್ರೀಡಾಕೂಟದಲ್ಲಿ 2 ಪದಕ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಕೀರ್ತಿಗೆ ಅವನಿ ಲೇಖರಾ ಪಾತ್ರರಾಗಿದ್ದಾರೆ.

ಈ ಫೈನಲ್ ಪಂದ್ಯದಲ್ಲಿ ಭಾರತದ ಅವನಿ ಲೇಖರಾ ಒಟ್ಟು 445.9ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೇರಿ ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾರೆ. ಅಂತಿಮ ಸುತ್ತು ಆರಂಭಕ್ಕೂ ಮುನ್ನ ಅವನಿ ಕೇವಲ 149.5 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರು. ಆದರೆ ಅಂತಿಮ ಸುತ್ತಿನಲ್ಲಿ ಭರ್ಜರಿ ಪ್ರದರ್ಶನ ನೀಡಿ ಮೂರನೇ ಸ್ಥಾನ ಪಡೆದರು. ಚಿನ್ನದ ಹುಡುಗಿ ಅವನಿ ಲೇಖರ ಸಾಧನೆಯಿಂದ ಭಾರತ ಹೆಮ್ಮೆ ಪಡುವಂತಾಗಿ ಇದರೊಂದಿಗೆ ಭಾರತದ ಪದಕಗಳ ಸಂಖ್ಯೆ 12ಕ್ಕೇರಿದೆ.

- Advertisement -
spot_img

Latest News

error: Content is protected !!