ಬೆಂಗಳೂರು : ಕನ್ನಡ ಚಿತ್ರರಂಗದ ಹೆಸರಾಂತ ನಟಿ ದಿವಂಗತ ಬಿ.ಸರೋಜಾದೇವಿ ಪ್ರತಿ ವರ್ಷ ಅವರ ಗೌರವಾರ್ಥವಾಗಿ ಅಭಿನಯ ಸರಸ್ವತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ ಎಂದು ತಿಳಿಸಿದೆ.
ಪ್ರಶಸ್ತಿಯು ರೂ. 1 ಲಕ್ಷ ರೂ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ ಒಳಗೊಂಡಿರುತ್ತದೆ. ಅಭಿನಯ ಸರಸ್ಕೃತಿ ಬಿರುದಿನ ಹೆಸರಿನಲ್ಲಿ ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಅವಿಸ್ಮರಣೀಯ ಸೇವೆ ಸಲ್ಲಿಸಿರುವ ಮಹಿಳೆಯರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗುವುದು. ಪ್ರಸ್ತುತ ಜಾರಿಯಲ್ಲಿರುವ ಕನ್ನಡ ಚಲನಚಿತ್ರ ನೀತಿ-2011ರಲ್ಲಿನ ವಾರ್ಷಿಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಪಟ್ಟಿ ಅನುಬಂಧ-1ರಡಿ ಜಾರಿಗೆ ತರಲಾಗಿದೆ ಎಂದು ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕನ್ನಡ, ಹಿಂದಿ, ತಮಿಳು, ಹಾಗೂ ತೆಲುಗು ಸೇರಿದಂತೆ ಒಟ್ಟು ನಾಲ್ಕು ಭಾಷೆಗಳಲ್ಲಿ ನಟಿಸಿದ್ದ ಬಿ ಸರೋಜಿದೇವಿ ಸುಮಾರು 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗಷ್ಟೆ ಅವರು ವಯೋಸಹಜ ಕಾಯಿಲೆಯಿಂದ ಇತ್ತೀಚಿಗೆ ನಿಧನರಾಗಿದ್ದರು.


